ಮೆಕ್ಕಾದಿಂದ ಹಿಂದಿರುಗಿದ್ದ ವ್ಯಕ್ತಿಗೆ ಕೊರೋನಾ ದೃಢ; ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆ

ಬೆಂಗಳೂರು: ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಬಗ್ಗೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಮೆಕ್ಕಾದಿಂದ ಹಿಂದಿರುಗಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, “ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ ಚಿಕ್ಕಬಳ್ಳಾಪುರದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ,” ಎಂದು ಕೋರಿದ್ದಾರೆ.

ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ.“ನಮ್ಮ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ, ಸರ್ಕಾರಿ ಕಚೇರಿಗಳು ಹಾಗೂ ಮುಖ್ಯ ಸ್ಥಳಗಳಲ್ಲಿ ಥರ್ಮಲ್ ಟೆಸ್ಟ್, ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಚಿಂತನೆ ನಡೆಸುತ್ತಿದೆ,” ಎಂದು  ಶ್ರೀರಾಮುಲು ಹೇಳಿದ್ದಾರೆ.

ನಮ್ಮ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ, ಸರ್ಕಾರಿ ಕಛೇರಿಗಳು ಹಾಗೂ ಮುಖ್ಯ ಸ್ಥಳಗಳಲ್ಲಿ ಥರ್ಮಲ್ ಟೆಸ್ಟ್ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಚಿಂತನೆ ನಡೆಸುತ್ತಿದೆ.

ಸ್ವಕ್ಷೇತ್ರದಲ್ಲಿ ಕೊರೋನಾ ವೈರಸ್​ ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಚಿಕ್ಕಬಳ್ಳಾಪುರದತ್ತ ಹೊರಟಿದ್ದಾರೆ. ಮೆಕ್ಕಾ-ಮದೀನಾ ಪ್ರವಾಸ ಕೈಗೊಂಡವರು ಹಾಗೂ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವವರ ಮೇಲೆ ಕಟ್ಟು ನಿಟ್ಟಿನ ನಿಗಾ ಇಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಿಗೆ  ಡಾ.ಸುಧಾಕರ್ ಖಡಕ್ ಸೂಚನೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ