ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಸೋಂಕಿಗೆ ಇಂದು ಮೂವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶಾದ್ಯಂತ ಇದುವರೆಗೆ ಒಟ್ಟು 1,251 ಪ್ರಕರಣಗಳು ದಾಖಲಾಗಿವೆ. ಕಳೆದ24 ಗಂಟೆಯಲ್ಲಿ 227 ಪ್ರಕರಣಗಳು ಬೆಳಕಿಗೆ ಬಂದಿವೆ. ಇದುವರೆಗೂ ಕೊರೋನಾ ಸೋಂಕಿತರಲ್ಲಿ 101 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಧಿಕ ಸಂಖ್ಯೆಯಲ್ಲಿ ಮಾಸ್ಕ್ ಸಿದ್ದಪಡಿಸಲಾಗುತ್ತಿದೆ. ಲಾಕ್ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ವಲಸಿಗರಿಗೆ ಊಟ, ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಅಗತ್ಯ ವಸ್ತುಗಳ ಸಾಗಾಣಿಕೆಗೆ ಅವಕಾಶ ನೀಡಲಾಗಿದೆ.
ಹಲವು ರಾಜ್ಯಗಳಲ್ಲಿರುವ 23 ಲಕ್ಷ ವಲಸಿಗರಿಗೆ ಊಟ ಕಲ್ಪಿಸಲಾಗಿದೆ. 21 ಸಾವಿರ ಪುನರ್ವಸತಿ ಕೇಂದ್ರ ಆರಂಭಿಸಲಾಗಿದೆ. ಇದುವರೆಗೆ 42,788 ಲ್ಯಾಬ್ ಪರೀಕ್ಷೆ ನಡೆಸಲಾಗಿದೆ. ದೇಶಾದ್ಯಂತ 123 ಲ್ಯಾಬ್ ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.