ನವದೆಹಲಿ: ಪ್ರಧಾನಿ ಮೋದಿ ಅವರು ನಾಳೆ ಬೆಳಿಗ್ಗೆ 9 ಗಂಟೆಗೆ ಮತ್ತೊಂದು ವಿಡಿಯೋ ಬಿಡುಗಡೆ ಮಾಡಲಿದ್ದಾರೆ. ಈ ವಿಡಿಯೋ ಮೂಲಕ ಕೊರೋನಾ ಕುರಿತಾದ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರು ಯೋಗಾಸನ ಮಾಡುತ್ತಿರುವ ವಿಡಿಯೋ ಬಿಡುಗಡೆ ಮಾಡಿದ್ದರು.
ನಾಳೆ ಬೆಳಗ್ಗೆ 9 ಗಂಟೆಗೆ ವಿಡಿಯೋವೊಂದನ್ನು ಬಿಡುಗಡೆ ಮಾಡುವುದಾಗಿ ಪ್ರಧಾನಿ ಮೋದಿ ಅವರು ಇಂದು ಟ್ವೀಟ್ ಮಾಡಿದ್ದಾರೆ. ನಾಳೆ ಒಂಭತ್ತು ಗಂಟೆಗೆ ನನ್ನ ದೇಶವಾಸಿಗಳಿಗೆ ಸಣ್ಣ ವಿಡಿಯೋ ಸಂದೇಶವನ್ನು ಹಂಚಿಕೊಳ್ಳಲಿದ್ದೇನೆ ಎಂದು ಹೇಳಿದ್ದಾರೆ.
ದೇಶದಲ್ಲಿ ಮಾರಕ ಸೋಂಕು ಹರಡಲು ಆರಂಭವಾದ ದಿನದಿಂದ ಈವರೆಗೆ ಪ್ರಧಾನಿ ಮೋದಿ ಅವರು ಎರಡು ಬಾರಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದೀಗ ದೇಶದ ಜನರಿಗೆ ಕೊರೋನಾ ವೈರಸ್ ಕುರಿತಾಗಿ ನಾಳೆ ವಿಡಿಯೋ ಸಂದೇಶ ಹಂಚಿಕೊಳ್ಳಲಿದ್ದಾರೆ.