ಮುಂಬೈ, ಏ.6-ಅತಿ ಹೆಚ್ಚು ಸಾವು ಮತ್ತು ಸೋಂಕು ಪ್ರಕರಣಗಳು ವರದಿಯಾಗಿರುವ ಮಹಾರಾಷ್ಟ್ರದಲ್ಲಿ ದಿನೇ ದಿನೇ ಪರಿಸ್ಥಿತಿ ಆಘಾತಕಾರಿಯಾಗಿ ಪರಿಣಮಿಸಿದೆ.
ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ವಿವಿದ ನಗರಗಳಲ್ಲಿ ಕೊರೊನಾ ಸೋಂಕು ಮತ್ತು ಸಾವು ದಿನನಿತ್ಯದ ಸುದ್ದಿಯಾಗಿದೆ. ರಾಜ್ಯದಲ್ಲಿ ಈವರೆಗೆ 46 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 800ರ ಸನಿಹದಲ್ಲಿರುವ ಕಳವಳಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಕಳೆದ 12 ತಾಸುಗಳ ಅವಧಿಯಲ್ಲಿ ಮತ್ತೆ 33 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಅಧಿಕೃತ ಮೂಲಗಳ ಪ್ರಕಾರ ಪೀಡಿತರ ಸಂಖ್ಯೆ 782ಕ್ಕೇರಿದೆ.
ಮಹಾರಾಷ್ಟ್ರದಲ್ಲಿ ನಿನ್ನೆ 26 ಹೊಸ ಪ್ರಕರಣಗಳು ಪತ್ತೆಯಾಗಿತ್ತು.