ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶರ್ಮಿಳಾ ಮಾಂಡ್ರೆ ಅವರ ಗೊಂದಲದ ಹೇಳಿಕೆ

ಬೆಂಗಳೂರು, ಏ.6- ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶರ್ಮಿಳಾ ಮಾಂಡ್ರೆ ಅವರು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಹೈಗ್ರೌಂಡ್ ಠಾಣೆ ಪೋಲೀಸರು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.

ಮೊನ್ನೆ ಬೆಳಗಿನ ಜಾವ ಶರ್ಮಿಳಾ ಅವರು ಸ್ನೇಹಿತನ ಜೊತೆ ಜಾಗ್ವರ್ ಕಾರಿನಲ್ಲಿ ಹೋಗುತ್ತಿದ್ದಾಗ ಅತಿವೇಗದಿಂದಾಗಿ ವಸಂತನಗರದ ಬ್ರಿಡ್ಜ್ ಬಳಿ ಪಿಲ್ಲರ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೋಲೀಸರು ಶರ್ಮಿಳಾ ಅವರಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಇವರು ನೀಡಿರುವ ಹೇಳಿಕೆಯಲ್ಲಿ ಗೊಂದಲಗಳಿರುವುದರಿಂದ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದು, ಸಿಸಿಟಿವಿ ಪರಿಶೀಲಿಸಿದರಾದರೂ ಸ್ಪಷ್ಟವಾಗಿ ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎಂಬುದು ಗೋಚರಿಸಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ