ಕೊರೊನಾ ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ (55) ಆಸ್ಪತ್ರೆಗೆ ದಾಖಲು

ಲಂಡನ್, ಏ.6- ಡೆಡ್ಲಿ ಕೊರೊನಾ ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ (55) ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹತ್ತು ದಿನಗಳ ಹಿಂದೆಯೇ ಇಂಗ್ಲೆಂಡ್ ಪ್ರಧಾನಿಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಆದರೆ, ರೋಗ ಲಕ್ಷಣಗಳು ಮುಂದುವರಿದು ಆರೋಗ್ಯ ಮತ್ತಷ್ಟು ಹದಗೆಟ್ಟ ಕಾರಣ ಅವರನ್ನು ಲಂಡನ್‍ನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ವೈದ್ಯರ ಕಟ್ಟುನಿಟ್ಟಿನ ಸಲಹೆ ಮೇರೆಗೆ ಬೋರಿಸ್ ಜಾನ್ಸನ್ ಅವರನ್ನು ಆಸ್ಪತ್ರೆಗೆ ದಾಖಲಿಸಾಗಿದ್ದು, ಇದು ಮುನ್ನೆಚ್ಚರಿಕೆ ಕ್ರಮವಾಗಿದೆ ಎಂದು ಬಣ್ಣಿಸಲಾಗಿದೆ.

ಜಾನ್ಸನ್ 10 ದಿನಗಳ ಹಿಂದೆಯೇ ಶೀತ, ಕೆಮ್ಮು ಮತ್ತು ಜ್ವರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿತು.

ಗಣ್ಯರ ಹಾರೈಕೆ: ಬ್ರಿಟನ್ ಪ್ರಧಾನಿ ಶೀಘ್ರ ಗುಣಮುಖರಾಗಲಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾಗಿಗಣ್ಯರು ಹಾರೈಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ