ನ್ಯೂಯಾರ್ಕ್‍ನ ಪ್ರಸಿದ್ಧ ಬ್ರಾಂಕ್ಸ್ ಮೃಗಾಲಯದಲ್ಲಿ ಹುಲಿ ಮತ್ತು ಸಿಂಹಗಳಿಗೆ ಡೆಡ್ಲಿ ಕೊರೊನಾ ವೈರಸ್ ತಗುಲಿರುವ ಹಿನ್ನೆಲೆಯಲ್ಲಿ ಭಾರತದ ಎಲ್ಲ ಮೃಗಾಲಯಗಳಲ್ಲೂ ತೀವ್ರ ಕಟ್ಟೆಚ್ಚರ

ನವದೆಹಲಿ,ಏ.6- ಅಮೆರಿಕದ ನ್ಯೂಯಾರ್ಕ್‍ನ ಪ್ರಸಿದ್ಧ ಬ್ರಾಂಕ್ಸ್ ಮೃಗಾಲಯದಲ್ಲಿ ಹುಲಿ ಮತ್ತು ಸಿಂಹಗಳಿಗೆ ಡೆಡ್ಲಿ ಕೊರೊನಾ ವೈರಸ್ ತಗುಲಿರುವ ಹಿನ್ನೆಲೆಯಲ್ಲಿ ಭಾರತದ ಎಲ್ಲ ಮೃಗಾಲಯಗಳಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಮೈಸೂರು ಮೃಗಾಲಯ ಸೇರಿದಂತೆ ದೇಶದ ಎಲ್ಲ ಪ್ರಾಣಿ ಸಂಗ್ರಹಾಲಯಗಳು ಮತ್ತು ವನ್ಯಧಾಮಗಳಿಗೆ ಪತ್ರ ಬರೆದಿರುವ ಕೇಂದ್ರೀಯ ಮೃಗಾಲಯ ಪ್ರಾಧಿಕಾರ (ಸಿಝಡ್‍ಎ) ಪ್ರಾಣಿಗಳಿಗೆ ಸೋಂಕು ಹರಡುವ ಭೀತಿ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಿದೆ.

15 ದಿನಗಳಿಗೊಮ್ಮೆ ಪ್ರಾಣಿಗಳ ರಕ್ತ ಮಾದರಿಯನ್ನು ತಪಾಸಣೆಗೊಳಪಡಿಸಬೇಕು ಮತ್ತು ಪ್ರಾಣಿಗಳ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು ಎಂದು ಸಿಝಡ್‍ಎ ಸದಸ್ಯ ಕಾರ್ಯದರ್ಶಿ ಎಸ್.ಪಿ.ಯಾದವ್ ಎಲ್ಲ ಮೃಗಾಲಯಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.

ನ್ಯೂಯಾರ್ಕ್ ಮೃಗಾಲಯದಲ್ಲಿ ನಾಲ್ಕು ವರ್ಷದ ಹುಲಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಆ ವ್ಯಾಘ್ರದೊಂದಿಗೆ ಸಂಪರ್ಕದಲ್ಲಿದ್ದ ಇತರ ಆರು ಹುಲಿ ಮತ್ತು ಸಿಂಹಗಳೂ ಕೂಡ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭವನೀಯ ಸೋಂಕು ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ