![siddaramaiah](http://kannada.vartamitra.com/wp-content/uploads/2019/12/siddaramaiah-1-678x377.jpg)
ಬೆಂಗಳೂರು,ಏ.6- ಇಂದಿರಾ ಕ್ಯಾಂಟಿನ್ ಮೂಲಕ ಬಡವರಿಗೆ ಊಟ-ತಿಂಡಿಯನ್ನು ಉಚಿತವಾಗಿ ನೀಡಿ ದುರುಪಯೋಗಕ್ಕೆ ಅವಕಾಶ ಮಾಡಿಕೊಡುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಂದಿರಾ ಕ್ಯಾಂಟಿನ್ನಲ್ಲಿ ನೀಡುತ್ತಿದ್ದ ಊಟ-ತಿಂಡಿ ನಿಲ್ಲಿಸಿರುವ ವಿಷಯದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದ ಬಗ್ಗೆ ಸಿಎಂ ಅವರು ದೂರವಾಣಿ ಮೂಲಕ ಸಿದ್ದರಾಮಯ್ಯನವರೊಂದಿಗೆ ಇಂದು ಮಾತುಕತೆ ನಡೆಸಿ ದುರುಪಯೋಗವಾದ ಹಿನ್ನೆಲೆಯಲ್ಲಿ ಉಚಿತ ಊಟ ನಿಲ್ಲಿಸಿ ದರ ನಿಗದಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದುರುಪಯೋಗವಾಗದಂತೆ ಕ್ರಮ ವಹಿಸಿ ಬಡವರಿಗೆ ಉಚಿತ ಊಟ ನೀಡಿ ದುರುಪಯೋಗಕ್ಕೆ ಅವಕಾಶ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಈ ಕುರಿತು ಪರಿಶೀಲನೆ ನಡೆಸುವುದಾಗಿ ಯಡಿಯೂರಪ್ಪ ಅವರು ಮಾತುಕತೆ ವೇಳೆ ಸಿದ್ದರಮಾಯ್ಯ ಅವರಿಗೆ ತಿಳಿಸಿದರು.
ಲಾಕ್ಡೌನ್ನಿಂದ ರೈತರು, ಕೃಷಿ ಕಾರ್ಮಿಕರು, ಜತೆಗೆ ಹಲವಾರು ಕ್ಷೇತ್ರಗಳ ದುಡಿಯುವ ವರ್ಗದವರಿಗೆ ತೊಂದರೆಯಾಗಿದೆ. ಅವರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಇದೇ ವೇಳೆ ಸಿದ್ದರಾಮಯ್ಯ ಅವರು ಒತ್ತಾಯಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು ಪ್ರತಿಪಕ್ಷಗಳ ಸಲಹೆ-ಸೂಚನೆ ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.