ಮೈಸೂರು,ಏ.16- ಅಮೆರಿಕದ ನ್ಯೂಯಾರ್ಕ್ ನಗರದ ಮೃಗಾಲಯದಲ್ಲಿ ಹುಲಿ, ಸಿಂಹಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅತಿಹೆಚ್ಚು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮಾತನಾಡಿ, ಮೃಗಾಲಯದ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶ ಕಲ್ಪಿಸುತ್ತಿಲ್ಲ. ಎಲ್ಲ ಸಿಬ್ಬಂದಿ ಮಾಸ್ಕ್ ಧರಿಸಿ ಬರಬೇಕು. ಸ್ಯಾನಿಟಸೈರ್ ಬಳಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ನಮ್ಮ ಮೃಗಾಲಯದಲ್ಲಿ ಪ್ರಾಣಿಗಳ ನಡುವೆ ಅಂತರ ಕಾಯ್ದುಕೊಳ್ಳಲಾಗಿದೆ. ಪ್ರಾಣಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಮುಂಜಾಗ್ರತೆ ವಹಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.