ಭಾರತೀಯ ಮೂಲದ ಅಮೆರಿಕದ ಹಿರಿಯ ಪತ್ರಕರ್ತ ಬ್ರಹ್ಮ ಕಾಂಚಿಬೋಟ್ಲಾ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ

ನ್ಯೂಯಾರ್ಕ್, ಏ.8-ಭಾರತೀಯ ಮೂಲದ ಅಮೆರಿಕದ ಹಿರಿಯ ಪತ್ರಕರ್ತ ಬ್ರಹ್ಮ ಕಾಂಚಿಬೋಟ್ಲಾ ನ್ಯೂಯಾಕ್‍ನ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‍ಐ)ದ ವರದಿಗಾರರಾಗಿದ್ದ ಅವರಿಗೆ ಕೆಲವು ದಿನಗಳ ಹಿಂದೆ ಸೋಂಕು ಕಾಣಿಸಿಕೊಂಡು ನ್ಯೂಯಾರ್ಕ್‍ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಧಾನಿ ಸಂತಾಪ : ಬ್ರಹ್ಮ ಕಾಂಚಿಬೋಟ್ಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಮೆರಿಕ ಮತ್ತು ಭಾರತೀಯ ಪತ್ರಿಕೋದ್ಯಮಕ್ಕೆ ಇವರು ಸಲ್ಲಿಸಿರುವ ಸೇವೆ ಶ್ಲಾಘನೀಯ ಎಂದು ಮೋದಿ ಬಣ್ಣಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ