ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಅವ ತಿಂಗಳಾಂತ್ಯದವರೆಗೆ ವಿಸ್ತರಿಸಿದ್ದು, ಕರ್ನಾಕದಲ್ಲೂ ಭಾಗಶಃ ಲಾಕ್‌ಡೌನ್ ಅವ ವಿಸ್ತರಣೆ ಆಗುವ ಎಲ್ಲ ಲಕ್ಷಣಗಳೂ ಇವೆ.
ಅತ್ತ ಹೊಸದಿಲ್ಲಿಯಲ್ಲಿ ಪ್ರತಿಪಕ್ಷ ನಾಯಕರ ಸಭೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶಾದ್ಯಂತ ಕೊರೋನಾ ತಹಬದಿಗೆ ಬಾರದೇ ಇರುವುದರಿಂದ, ಸೋಂಕು ಇನ್ನೂ ಹರಡುತ್ತಲೇ ಇರುವುದರಿಂದ ದೇಶದಲ್ಲಿ ಲಾಕ್‌ಡೌನ್ ವಿಸ್ತರಣೆ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಮಣಿಪುರ, ಗೋವಾ, ಪಂಜಬ, ಉತ್ತರ ಪ್ರದೇಶ, ಮಹಾರಾಷ್ಟ್ರದ ಮುಂಬೈ, ಪುಣೆ ಸೇರಿ ಹಲವೆಡೆ ಏ.೩೦ ರವರೆಗೆ ಲಾಕ್ ಡೌನ್ ಅವ ವಿಸ್ತರಿಸಿ ಆಯಾ ರಾಜ್ಯದ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.
ಈ ನಡುವೆ ಕರ್ನಾಟಕದಲ್ಲೂ ಲಾಕ್ ಡೌನ್ ಅನಿವಾರ್ಯವಾಗಿದೆ ಎಂಬ ಸಲಹೆಯನ್ನು ಸರ್ಕಾರಕ್ಕೆ ವೈದ್ಯಕೀಯ ತಜ್ಞರು ನೀಡಿದ್ದಾರೆ. ತಜ್ಞರ ಸಮಿತಿ ನೀಡಿರುವ ವರದಿ ಪ್ರಕಾರ, ಕೆಲವೆಡೆ ಲಾಕ್ ಡೌನ್ ಸಡಿಲಗೊಳಿಸಲು ಅಡ್ಡಿಯಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಒಂದು ವೇಳೆ ಲಾಕ್ ಡೌನ್ ವಿಸ್ತರಿಸಲು ಸರ್ಕಾರ ನಿರ್ಣಿಯಿಸಿದರೆ, ಯಾರೂ ವಿರೋದಿಸಬಾರದು. ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಏ.೯ರ ಗುರುವಾರದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಸಚಿವ ಸಂಪುಟ ಸಭೆ ಕರೆದಿದ್ದು, ಲಾಕ್ ಡೌನ್ ಅವ ವಿಸ್ತರಿಸುವ ಬಗ್ಗೆ ನಿರ್ಣಯ ಹೊರಬೀಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ಶಾಸಕರ ವೇತನ ಕಡಿತದ ಕುರಿತೂ ನಿರ್ಣಯ ತೆಗೆದುಕೊಳ್ಳುವ ಸಂಭವ ನಿಚ್ಚಳವಾಗಿದೆ.
ಸಾಲದ್ದಕ್ಕೆ ಏ.೧೧ ರ ಶನಿವಾರದಂದ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ವೀಡಿಯೋ ಸಂವಾದ ನಡೆಸಲಿದ್ದು, ಆಯಾ ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ತೆರವು ಅಥವಾ ಮುಂದುವರಿಸುವ ಸಂಬಂಧ ಸ್ಪಷ್ಟ ನಿಲುವು ತಿಳಿಸಲಿದ್ದಾರೆ.
ಲಾಕ್ ಡೌನ್ ಕಡ್ಡಾಯ ಜಾರಿ:
ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಸಿಎಂ ಯಡಿಯೂರಪ್ಪ, ಏ.೧೧ ರಂದು ನಡೆಯಲಿರುವ ಪ್ರಧಾನಿ ಜೊತೆಗಿನ ವೀಡಿಯೋ ಸಂವಾದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.
ಈ ಹಿಂದೆ ಕರ್ನಾಟಕದಲ್ಲಿ ಲಾಕ್ ಡೌನ್ ಪರಿಣಾಮಕಾರಿ ಅನುಷ್ಠಾನ ಆಗಿಲ್ಲವೆಂದು ಪಿಎಂ ಮೋದಿ ತಿಳಿಸಿದ್ದರು. ಇದೀಗ ವಿಡಿಯೋ ಸಂವಾದಕ್ಕೆ ಆಹ್ವಾನ ಬಂದಿದ್ದು, ಲಾಕ್ ಡೌನ್ ಅನುಷ್ಠಾನ, ಆಹಾರ ಧಾನ್ಯ ಹಂಚಿಕೆ, ಹಾಲು ವಿತರಣೆ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಜಿಲ್ಲಾಧಿಕಾರಿಗಳು ಪೊಲೀಸ್ ಅಕಾರಿಗಳು ಲಾಕ್ ಡೌನನ್ನು ಕಡ್ಡಾಯವಾಗಿ ಜರಿಗೊಳಿಸುವಂತೆ ಸೂಚನೆ ನೀಡಿದರು.
ಬೆಳಿಗ್ಗೆಯಿಂದ ರಾತ್ರಿ ವರೆಗೂ ಅಗತ್ಯ ವಸ್ತುಗಳ ಅಂಗಡಿ ತೆರೆಯುವ ಮೂಲಕ ಜನಸಂದಣಿಯಾಗದಂತೆ ಎಚ್ಚರ ವಹಿಸಿ ಎಂದು ಸೂಚನೆ ನೀಡಲಾಗಿದೆ.
ಕ್ಯಾಂಪ್ ನಲ್ಲಿರುವ ಕಾರ್ಮಿಕರಿಗೆ ಅಗತ್ಯ ವ್ಯವಸ್ಥೆ, ಅವರ ಆರೋಗ್ಯ ತಪಾಸಣೆಗೆ ಕ್ರಮ ವಹಿಸುವಂತೆ ಸೂಚಿಸಿದರು.
ಮೈಸೂರು, ಬೀದರ್, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ ಮೊದಲಾದ ಕಡೆಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಂಡು ಏ. ೧೪ ರ ಒಳಗೆ ನಿಯಂತ್ರಣ ಕೈಗೊಳ್ಳಿ ಎಂದು ಸೂಚಿಸಿದರು.
ಲಾಕ್ ಡೌನ್ ತೆರವು ಸಂಬಂಧ ತಜ್ಞರ ಸಮಿತಿ ಕೊಟ್ಟ ಶಿಫಾರಸುಗಳು
* ಆಯಾ ಜಿಲ್ಲಾ ಪರಿಸ್ಥಿತಿಗೆ ಅನುಗುಣವಾಗಿ ಹಂತ-ಹಂತವಾಗಿ ಲಾಕ್ ಡೌನ್ ತೆರವುಗೊಳಿಸಲು ಅಡ್ಡಿಯಿಲ್ಲ
* ಮುಂದಿನ ಆರು ತಿಂಗಳವರೆಗೆ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ.
* ಲಾಕ್ ಡೌನ್ ನಂತರ ಪ್ರಕರಣಗಳು ವರದಿಯಾದ ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸಬೇಕು
* ಸಾಮಾಜಿಕ ಅಂತರ ಕಟ್ಟು ನಿಟ್ಟಾಗಿ ಕಾಯ್ದುಕೊಳ್ಳುವುದನ್ನು ಮುಂದುವರಿಸಬೇಕು.
* ಮೇ ೩೧ ರವರೆಗೆ ಶಾಲೆ ಕಾಲೇಜುಗಳನ್ನು ಮುಚ್ಚಬೇಕು. ಆನ್ ಲೈನ್ ತರಗತಿಗಳಿಗೆ ಉತ್ತೇಜನ ನೀಡಬೇಕು
* ಎ.ಸಿ. ಇಲ್ಲದ ಎಲ್ಲ ಅಂಗಡಿಗಳನ್ನು ತೆರೆಯಬಹುದು.
* ಐಟಿ, ಬಿಟಿ ಉದ್ಯಮಗಳು, ಅತ್ಯಾವಶ್ಯಕ ಸೇವೆ ಒದಗಿಸುವ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳಲ್ಲಿ ಶೇ. ೫೦ ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಬಹುದು.
* ಅಂತಾರಾಜ್ಯ ಗಡಿಗಳಲ್ಲಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಪ್ರವೇಶ ನೀಡಬೇಕು.
* ಸ್ಥಳೀಯ ಅಂಗಡಿಗಳು ಹೆಚ್ಚಿನ ಅವಧಿಗೆ ತೆರೆದಿಡುವ ಮೂಲಕ ಜನ ಸಂದಣಿಯಾಗದಂತೆ ಎಚ್ಚರ ವಹಿಸಬೇಕು.
* ಅಂತಾರಾಜ್ಯ ರೈಲು ಸೇವೆ, ವಿಮಾನ ಸೇವೆಗಳನ್ನು ಸದ್ಯ ಪ್ರಾರಂಭಿಸಬಾರದು.
* ಕೋವಿಡ್ ಪ್ರಕರಣಗಳು ವರದಿಯಾದಾಗ ಚಿಕಿತ್ಸೆಗೆ ವೈದ್ಯರು, ದಾದಿಯರು, ಇತರ ಅರೆ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸುರಕ್ಷಾ ಸಾಮಗ್ರಿಗಳನ್ನು ಒದಗಿಸಬೇಕು.
* ಏ.೧೨ ರ ನಂತರ ರಾಪಿಡ್ ಟೆಸ್ಟ ಕಿಟ್ ಗಳ ಪೂರೈಕೆಯಾಗಲಿದ್ದು, ಕ್ವಾರಂಟೈನ್ ಮತ್ತು ಪರೀಕ್ಷಾ ಪ್ರಕ್ರಿಯೆಗಳು ಇನ್ನಷ್ಟು ಪರಿಣಾಮಕಾರಿಯಾಗಲಿವೆ.
* ನಾನ್ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಸಾಧ್ಯವಾದಷ್ಟು ಟೆಲಿ ಕನ್ಸಲ್ಟೇಷನ್ ನಡೆಸಬೇಕು.
* ಜನರ ಅನವಶ್ಯಕ ಓಡಾಟಕ್ಕೆ ಕಡಿವಾಣ ಹಾಕಬೇಕು.
* ಏ. ೩೦ ರ ವರೆಗೆ ಎಸಿ ಬಸ್ / ಮೆಟ್ರೋ ಸೇವೆ ಬೇಡ.
ನಮ್ಮ ವೇತನ ಕಡಿತ ಮಾಡಿ, ಸರ್ಕಾರಿ ನೌಕರರದ್ದು ಬೇಡ
ಜನಪ್ರತಿನಿಗಳ ವೇತನ ಕಡಿತ ಮಾಡುವ ಸರ್ಕಾರದ ಪ್ರಸ್ತಾವನೆಗೆ ಸಹಮತ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಪ್ರಸ್ತಾಪಕ್ಕೆ ಬೇಡ ಎಂದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿನ್ನೆ ದೂರವಾಣಿ ಕರೆ ಮಾಡಿ, ಶಾಸಕರು, ಸಂಸದರ ವೇತನ ಕಡಿತ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ನಮ್ಮ ಸಹಮತವೂ ಇದೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷಗಳು ಸಹಕರಿಸಬೇಕಾಗುತ್ತದೆ. ಆದರೆ, ಸರ್ಕಾರಿ ನೌಕರರ ವೇತನ ನಿಲ್ಲಿಸುವ ಅಥವಾ ಕಡಿತ ಮಾಡುವ ನಿರ್ಧಾರ ಸರಿಯಲ್ಲ. ಈಗಾಗಲೇ ಅವರು ಒಂದು ದಿನದ ವೇತನವನ್ನು ದೇಣಿಯಾಗಿ ನೀಡಿದ್ದಾರೆ. ಅದು ಸಾಕು ಎಂಬುದು ನನ್ನ ಭಾವನೆ. ಬೇಕಾದರೆ ಸಂಸದರು, ಶಾಸಕರ ವೇತನವನ್ನು ಇನ್ನಷ್ಟು ವೇತನ ಕಡಿತ ಮಾಡಲಿ. ಅದಕ್ಕೆ ನಮ್ಮ ವಿರೋಧ ಇಲ್ಲ ಎಂದಿದ್ದಾರೆ.