ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೋ ಕಾನರೆನ್ಸ್ ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಘೋಷಣೆ?

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ವೀಡಿಯೋ ಮೂಲಕ ಶನಿವಾರ ಎರಡನೇ ಬಾರಿ ಸಂವಾದ ನಡೆಯಲಿದ್ದು, ದೇಶಾದ್ಯಂತ ಲಾಕ್‍ಡೌನ್ ಮತ್ತಷ್ಟು ದಿನಗಳಿಗೆ ವಿಸ್ತರಿಸುವ ಕುರಿತು ಚರ್ಚೆ ನಡೆಯಲಿದೆ.

ಪ್ರಧಾನಿ ಕಾರ್ಯಾಲಯ ಈ ಕುರಿತು ಮಾಹಿತಿ ನೀಡಿದ್ದು, ಲಾಕ್‍ಡೌನ್ ಮುಂದುವರಿಕೆ ಕುರಿತು ಚರ್ಚೆ ಜತೆಗೆ ಹೆಚ್ಚಿನ ಕ್ರಮ ಕೈಗೊಳ್ಳುವಿಕೆ ಕುರಿತು ಕೂಡ ಸಂವಾದದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದೆ.

ಕೇಂದ್ರ ಸರ್ಕಾರ ಲಾಕ್‍ಡೌನ್ ಮತ್ತಷ್ಟು ದಿನಗಳಿಗೆ ಮುಂದುವರಿಸುವ ಇಂಗಿತ ಹೊಂದಿದ್ದು, ಈಗಾಗಲೇ ಹಲವು ರಾಜ್ಯಗಳು ಮತ್ತು ವಿಪಕ್ಷಗಳು ಇದಕ್ಕೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಡಿಶಾ ಹಾಗೂ ಪಂಜಾಬ್‍ನಲ್ಲಿ ಈಗಾಗಲೇ ಲಾಕ್‍ಡೌನ್ ಮುಂದುವರಿಸಿ ಆದೇಶ ಹೊರಡಿಸಿವೆ.

ಈಗಾಗಲೇ ಸರ್ವಪಕ್ಷಗಳ ಸಭೆಯಲ್ಲಿ ಏಕಾಏಕಿ ಲಾಕ್‍ಡೌನ್ ತೆರವುಗೊಳಿಸಲು ಆಗುವುದಿಲ್ಲ ಎಂದು ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಹಾಗಾಗಿ ಲಾಕ್‍ಡೌನ್ ವಿಸ್ತರಣೆ ಕುರಿತು ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಅಕಾರಿಗಳು ಜತೆ ನಡೆಸುವ ಕಾನರೆನ್ಸ್ ಎಲ್ಲರ ಕುತೂಹಲ ಕೆರಳಿಸಿದೆ. ಸಭೆ ಬಳಿಕ ಮೋದಿ ಅವರು ದೇಶವನ್ನುದ್ದೇಶಿಸಿ ಪ್ರಮುಖ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ