ವಿಶ್ವಾದ್ಯಂತ 1 ಲಕ್ಷ ದಾಟಿದ ಕೊರೋನಾ ಸಾವಿನ ಸಂಖ್ಯೆ; ಅಮೆರಿಕದಲ್ಲಿ ಒಂದೇ ದಿನ 2108 ಜನ ಬಲಿ

ಹೊಸದಿಲ್ಲಿ: ವಿಶ್ವಾದ್ಯಂತ ಕೊರೋನಾ ವೈರಸ್ಮತ್ತಷ್ಟು ಕ್ಷಿಪ್ರ ವೇಗದಲ್ಲಿ ಹರಡುತ್ತಲೇ ಇದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸದ್ಯ ಕೊರೋನಾ ಸೋಂಕಿತರ ಸಂಖ್ಯೆ 1.6 ಮಿಲಿಯನ್ ದಾಟಿದೆ. ಈಮಹಾಮಾರಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 1 ಲಕ್ಷ ದಾಟಿದೆ

ವಿಶ್ವಾದ್ಯಂತ 16,94,954 ಮಂದಿಗೆ ಕೊರೋನಾ ವೈರಸ್​ ತಗುಲಿದೆ ಎಂದು ತಿಳಿದು ಬಂದಿದೆ. ಕೊರೋನಾ ಮಹಾಮಾರಿಗೆ ವಿಶ್ವದ ದೊಡ್ಡಣ್ಣ ಅಮೆರಿಕ ತತ್ತರಿಸಿ ಹೋಗಿದೆ. ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಒಂದೇ ದಿನದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 2108 ಜನರು ಕೊರೋನಾದಿಂದ ಮೃತಪಟ್ಟಿದ್ದಾರೆ. ಒಂದೇ ದಿನ 2 ಸಾವಿರಕ್ಕೂ ಹೆಚ್ಚು ಜನ ಸತ್ತಿದ್ದು ಇದೇ ಮೊದಲು. ಈವರೆಗೆ ಕೊರೋನಾದಿಂದ ಅಮೆರಿಕದಲ್ಲಿ ಸತ್ತವರ ಸಂಖ್ಯೆ 18,725 ಎಂದು ಜಾನ್ ಹಾಪ್ಕಿನ್ಸ್​ ಯುನಿವರ್ಸಿಟಿ ತಿಳಿಸಿದೆ.

ಇನ್ನು, ಇಟಲಿಯೂ ಸಹ ಕೊರೋನಾ ಹೊಡೆತಕ್ಕೆ ತತ್ತರಿಸಿ ಹೋಗಿದೆ. ಈವರೆಗೆ 18,849 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಸ್ಪೇನ್​ನಲ್ಲಿ ಇಲ್ಲಿಯವರೆಗೆ 16,081 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ಫ್ರಾನ್ಸ್​​ನಲ್ಲಿ 13,197 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಐದನೇ ಸ್ಥಾನದಲ್ಲಿರುವ ಇಂಗ್ಲೆಂಡಿನಲ್ಲಿ 8,958 ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ