ಮಂಗಳೂರು: ತಾಲೂಕಿನ ಮಲ್ಲೂರಿನಲ್ಲಿ ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ ಇಬ್ಬರು ಎಸ್ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಶನಿವಾರ ಬಂಸಿದ್ದಾರೆ.
ಮಲ್ಲೂರು ಬದ್ರಿಯಾ ನಗರ ನಿವಾಸಿಗಳಾದ ಇಬ್ರಾಹಿಂ ಎಂಬವರ ಪುತ್ರ ಇಸ್ಮಾಯಿಲ್ (45) ಮತ್ತು ಅಜಂ ಎಂಬವರ ಪುತ್ರ ಅಶ್ರಫ್ (32) ಬಂತ ಆರೋಪಿಗಳು.
ಮಲ್ಲೂರಿನ ಆಶಾ ಕಾರ್ಯಕರ್ತೆ ವಸಂತಿ ಎಂಬವರು ಆರೋಗ್ಯ ಇಲಾಖೆಯ ಸೂಚನೆಯಂತೆ ಕೊರೋನಾ ಸೋಂಕು ಸಂಬಂಸಿ ಮಾಹಿತಿಗಾಗಿ ತೆರಳಿದಾಗ ಆರೋಪಿಗಳು ಅವರನ್ನು ಅವಾಚ್ಯ ಶಬ್ದಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡಿದ್ದಾರೆ. ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಒಡ್ಡಿದ್ದಾರೆ.
ಸಾರ್ವಜನಿಕ ಹಿತಾಸಕ್ತಿಯಿಂದ ಸರಕಾರದ ಸೂಚನೆಯಂತೆ ಕೆಲಸ ಮಾಡುತ್ತಿದ್ದ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.
ಈ ಸಂಬಂಧ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕಠಿಣ ಕ್ರಮಕ್ಕೆ ಸೂಚನೆ
ಈಗಿನ ಪರಿಸ್ಥಿತಿಯಲ್ಲಿ ಸರಕಾರಿ ಸೇವೆಯಲ್ಲಿರುವವರಿಗೆ ಸೇಡಿನಲ್ಲಿ ಅಥವಾ ಯಾವುದೇ ರೀತಿಯ ಕಿರುಕುಳ ನೀಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಡಾ.ಭರತ್ ಶೆಟ್ಟಿ ವೈ. ಪೊಲೀಸ್ ಅಕಾರಿಗಳಿಗೆ ಸೂಚಿಸಿದ್ದಾರೆ. ಕೊರೋನಾ ತಡೆಯಲು ಸರಕಾರ ಹಗಲಿರುಳು ಶ್ರಮಿಸುತ್ತಿದ್ದು ಜನರ ಒಳಿತಿಗಾಗಿ ಎಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.