ಬೆಂಗಳೂರು: ಬೆಂಗಳೂರನಲ್ಲಿ ತಬ್ಲೀಘಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೂ ಕೊರೋನಾ ಸೋಂಕು ಹರಡಿರುವ ಆತಂಕಕಾರಿ ವಿಚಾರ ಬಯಲಾಗಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ತಬ್ಲಿಘಿ ಜಮಾತ್ಗೆ ಹೋಗಿ ಬಂದಿದ್ದವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ವೈದ್ಯರಿಗೂ ಸೋಂಕು ತಗುಲಿದೆ.
ವೈದ್ಯರಾಗಿರುವ ಕಾರಣ ಹಲವರಿಗೆ ಚಿಕಿತ್ಸೆ ನೀಡಿದ್ದಾರೆ. ಹೀಗಾಗಿ ಆಸ್ಪತ್ರೆ ಮುಚ್ಚಲು ಬಿಬಿಎಂಪಿ ತಯಾರಿ ನಡೆಸುತ್ತಿದೆ.
ವೈದ್ಯರ ಪ್ರಾಥಮಿಕ ಸಂಪರ್ಕಿತರನ್ನ ಪತ್ತೆ ಕಾರ್ಯ ಪ್ರಾಂಭಿಸಿರುವ ಮಹಾನಗರ ಪಾಲಿಕೆ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.
ಸೋಂಕಿತರ ಸಂಖ್ಯೆ 215ಕ್ಕೆ ಏರಿಕೆ
ಶನಿವಾರ 8 ಜನರಲ್ಲಿ ಸೋಂಕು ದೃಢವಾಗಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 215 ತಲುಪಿದೆ. ಇವರಲ್ಲಿ 39 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದು 6 ಮಂದಿ ಮೃತಪಟ್ಟಿದ್ದಾರೆ. ಸದ್ಯ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 170 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಮತ್ತೆ 5 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 47ಕ್ಕೆ ಏರಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ.
ನಗರದಲ್ಲಿ ಹೆಚ್ಚಿದ ಭದ್ರತೆ
ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತೆ ಇನ್ನಷ್ಟು ಬಿಗಿಯಾಗಿದೆ. ನಗರದ ಶೇ.50 ರಸ್ತೆಗಳನ್ನು ಬಂದ್ ಮಾಡಿ ಏಕಮುಖ ರಸ್ತೆಯನ್ನಾಗಿಸಲಾಗಿದೆ. ಈ ಮೂಲಕ ಸಂಚಾರ ದಟ್ಟಣೆ ತಡೆಯಲು ಪೊಲೀಸರು ನಿರ್ಧರಿಸಿದ್ದಾರೆ. ಸದ್ಯ ಪಾಸ್ ಇಲ್ಲದ 24 ಸಾವಿರ ವಾಹನಗಳನ್ನು ಜಪ್ತಿ ಮಾಡಲಾಗಿದೆ.