ಬೆಂಗಳೂರು : ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯ್ಯೂರಪ್ಪನವರು ಮಹತ್ವದ ಮುನ್ಸೂಚನೆ ನೀಡಿದ್ದಾರೆ. ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ನಡೆದ ಸಂವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತ ಮುಂದಿನ 15 ದಿನಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ಶೀಘ್ರದಲ್ಲೇ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು ಅಂತ ಹೇಳಿದರು.
ಇದೇ ವೇಳೆ ಅವರು ಮಾತನಾಡುತ್ತ ಭಾಗಶಃ ಕಚೇರಿಗಳು ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗುವುದು ಅಂತ ಹೇಳಿದರು. ಇನ್ನು ಯಾವುದೇ ಕಾರಣಕ್ಕೂ ಲಾಕ್ಡೌನ್ ಉಲ್ಲಂಘನೆ ಮಾಡುವುದಕ್ಕೆ ಅವಕಾಶ ನೀಡೋದಿಲ್ಲ, ಮುಂಬರುವ ದಿವಸದಲ್ಲಿ ಇನ್ನೂ ಬಿಗಿಯಾಗಲಿದೆ ಅಂತ ಹೇಳಿದರು.