ಕೊರೋನಾ ಮೃತರ ಸಂಖ್ಯೆಯಲ್ಲಿ ಅಮೆರಿಕವೇ ಟಾಪ್; 20 ಸಾವಿರ ಜನರ ಸಾವು

ವಾಷಿಂಗ್ಟನ್​ : ವಿಶ್ವದ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ಮೊದಲಿರುವ ಅಮೆರಿಕ ಬಳಿ ಕೊರೋನಾ ವೈರಸ್ನಿಯಂತ್ರಣ ಸಾಧ್ಯವೇ ಆಗುತ್ತಿಲ್ಲ. ಈಗಾಗಲೇ ಅಮೆರಿಕದಲ್ಲಿ 20 ಜನರು ಕೊರೋನಾದಿಂದ ಮೃತಪಟ್ಟಿದ್ದು, ವಿಶ್ವದಲ್ಲಿ ಸಾವಿನ ಸಂಖ್ಯೆಯಲ್ಲಿ ಅಮೆರಿಕ ಮೊದಲ ಸ್ಥಾನಕ್ಕೇರಿದೆ.

24 ಗಂಟೆಯಲ್ಲಿ 911 ಜನರು ಮೃತಪಟ್ಟಿದ್ದಾರೆ. ಶನಿವಾರ 26 ಸಾವಿರ ಹೊಸ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 5.3 ಲಕ್ಷ ದಾಟಿದ್ದು, ಬರೋಬ್ಬರಿ 20,577 ಜನರು ಮೃತಪಟ್ಟಿದ್ದಾರೆ. ಅಮೆರಿಕದಲ್ಲಿ ಮೊಟ್ಟ ಮೊದಲ ಬಾರಿಗೆ ಕೊರೋನಾ ವೈರಸ್​ ಕಾಣಿಸಿಕೊಂಡಾಗ ಯಾವುದೇ ಮುಂಜಾಗೃತ ಕ್ರಮ ಕೈಗೊಂಡಿರಲಿಲ್ಲ. ಇದು ಕೊರೋನಾ ವೈರಸ್​ ಹರಡಲು ಪ್ರಮುಖ ಕಾರಣ ಎನ್ನಲಾಗಿದೆ. ಇನ್ನು, ಅತಿ ಜನ ನಿಬಿಡ ನಗರಗಳಾದ ನ್ಯೂಯಾರ್ಕ್​ ಸೇರಿ ಹಲವು ಕಡೆಗಳಲ್ಲಿ ಕೊರೋನಾ ಕಾಣಿಸಿಕೊಂಡಿದ್ದು, ಹೀಗಾಗಿ ಈ ವೈರಸ್​ ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ.

ಸ್ಪೇನ್​ ಕೂಡ ಈ ಭೀಕರ ವೈರಸ್​ ದಾಳಿಗೆ ತತ್ತರಿಸಿದೆ. 1.63 ಲಕ್ಷ ಜನರಲ್ಲಿ ಕೊರೋನಾ ಸೋಂಕು ಇದೆ. 16 ಸಾವಿರ ಮಂದಿ ಸತ್ತಿದ್ದಾರೆ. ಇಟಲಿಯಲ್ಲಿ 15 ಲಕ್ಷ ಜನರಿಗೆ ಸೋಂಕು ಅಂಟಿದ್ದು, 19 ಸಾವಿರ ಮಂದಿ ಅಸುನೀಗಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ