ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ ದಿಲ್ಲಿಯಲ್ಲಿ ಅಂಗಡಿ ಸ್ಮಾರಕ

ಬೆಳಗಾವಿ :ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ನಡೆದ ದಿಲ್ಲಿಯಲ್ಲಿ ಅವರ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಅವರು ಬುಧವಾರ ಬೆಳಗಾವಿ ಮಹಾನಗರದಲ್ಲಿರುವ ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಸುರೇಶ ಅಂಗಡಿ ಒಬ್ಬ ಉತ್ತಮ ಕೆಲಸಗಾರರಾಗಿದ್ದರು. ಕೇಂದ್ರ ರೈಲು ಸಚಿವರಾಗಿ ಉತ್ತಮ ಕೆಲಸ ನಿರ್ವಹಣೆ ಮಾಡಿದ್ದಾರೆ.
ಅವರ ನಿಧನದಿಂದ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದರು.
ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಿಸುವ ಮೂಲಕ ಅವರ ರಾಜಕೀಯ ಜೀವನದ ಆದರ್ಶವನ್ನು ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಲಾಗುವುದು ಎಂದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ ಸೇರಿದಂತೆ ಮುಂತಾದವರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ