
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯು ಉಗ್ರರ ಸಂಹಾರ ಮುಂದುವರಿಸಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರ ವಿರುದ್ಧ ನಡೆಸಿದ ಸುದೀರ್ಘ 12 ಗಂಟೆಯ ಕಾರ್ಯಾಚರಣೆಯಲ್ಲಿ ಶೋಪಿಯಾನ್ ಜಿಲ್ಲೆಯ ಸುಗನ್ ಗ್ರಾಮದಲ್ಲಿ ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.