ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 78,524 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 68 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಗುರುವಾರ ತಿಳಿದುಬಂದಿದೆ.
ಇನ್ನು ಒಂದೇ ದಿನ 971 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,05,526ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು 68,35,656 ಮಂದಿ ಸೋಂಕಿತರ ಪೈಕಿ 58,27,705 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 9,02,425 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.