ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸೀಮಿತ: ಎಂ.ಬಿ.ಪಾಟೀಲ

ವಿಜಯಪುರ: ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಸೀಮಿತವಾಗಿದೆ. ಇದಕ್ಕೆ ನಮ್ಮ ಕರ್ನಾಟಕಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ. ಏತನ್ಮಧ್ಯೆ ಕೇಂದ್ರ ಜಲಸಂಪನ್ಮೂಲ ಸಚಿವರು ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳ ಸಭೆ ಕರೆದಿರುವುದು ಕರ್ನಾಟಕದ ಹಿತಾಸಕ್ತಿಗೆ ಧಕ್ಕೆಯಾಗುವ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದ ತಮ್ಮ ಆತಂಕವನ್ನು ತೋಡಿಕೊಂಡಿರುವ ಅವರು, ಕೃಷ್ಣಾ ನೀರಿನ ಮರು ಹಂಚಿಕೆ ಕುರಿತು ಹೊಸ ನ್ಯಾಯಾೀಕರಣ ರಚನೆಯ ವಿಷಯವಾಗಿ ಕೇಂದ್ರ ಜಲಶಕ್ತಿ ಸಚಿವರು, ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳು ನಡೆಸಿದ ಸಭೆಯ ವರದಿಗಳು ಕೆಲವೊಂದು ರೀತಿಯಲ್ಲಿ ಗೊಂದಲ ಮೂಡಿಸಿವೆ.
ಕೃಷ್ಣಾ ನ್ಯಾಯಾೀಕರಣ ತೀರ್ಪಿನಿಂದ ಅನ್ಯಾಯವಾಗಿದೆ ಎಂದು ರಾಜ್ಯಗಳ ವಿಭಜನೆಯ ನಂತರ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಕಾನೂನು ಸಮರ ನಡೆಸಿದ್ದವು, ಇದಕ್ಕೆ ಸಂಬಂಸಿದಂತೆ ನ್ಯಾಯಾೀಕರಣವೂ ಈ ವಿಷಯವೂ ಆ ಎರಡು ರಾಜ್ಯಗಳ ನಡುವಿನ ವ್ಯಾಜ್ಯವಾಗಿದೆ ಎಂದು ತೀರ್ಪು ಸಹ ಪ್ರಕಟಿಸಿತ್ತು. ನಂತರ ಕೇಂದ್ರ ಸರ್ಕಾರವೂ ಸಹ ಇದೇ ನಿಲುವುನ್ನು ತಾಳಿ ಸುಪ್ರೀಂಕೋರ್ಟ್‍ಗೆ ಅಫಿಡೆವಿಟ್ ಸಹ ಸಲ್ಲಿಸಿತ್ತು.
ಆ ಮೂಲಕ ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಸೀಮಿತವಾಗಿರುವುದು ಸ್ಪಷ್ಟವಾಗಿದೆ. ಏತನ್ಮಧ್ಯೆ ಕೇಂದ್ರ ಜಲಸಂಪನ್ಮೂಲ ಸಚಿವರು ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳ ಸಭೆ ಕರೆದಿರುವುದು ಕರ್ನಾಟಕದ ಹಿತಾಸಕ್ತಿಗೆ ಧಕ್ಕೆಯಾಗುವ ಅನುಮಾನಕ್ಕೆ ಆತಂಕ್ಕೀಡುಮಾಡಿದೆ ಎಂದು ಪಾಟೀಲ ತಮ್ಮ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸರ್ವಪಕ್ಷಗಳ ಸಭೆ ಕರೆದು ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರವಾಗಿ ಮನವರಿಕೆ ಮಾಡಿಕೊಡಲು ಮುಂದಾಗಬೇಕು ಎಂದು ಎಂ.ಬಿ. ಪಾಟೀಲ ಒತ್ತಾಯಿಸಿದ್ದಾರೆ.
ಅದೇ ತೆರನಾಗಿ ಈ ಮನವಿಯನ್ನು ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಪ್ರಹ್ಲಾದ ಜೋಶಿ, ರಾಜ್ಯ ಜಲಸಂಪನ್ಮೂಲ ಸಚಿವ ಹಾಗೂ ರಾಜ್ಯ ಸರ್ಕಾರದ ಉನ್ನತ ಅಕಾರಿಗಳಿಗೂ ಎಂ.ಬಿ. ಪಾಟೀಲ ಸಲ್ಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ