ಧಾರವಾಡ ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಳವಾದ ಹಿನ್ನಲೆ ಅಲ್ಲಿಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಅಲ್ಲಿ ಆಗಿರುವ ತಪ್ಪುಗಳನ್ನು ತಿದ್ದುಕೊಳ್ಳುವ ಕಾರ್ಯ ನಡೆಯಲಿದೆ. ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಮತ್ತು ಮರಣ ಪ್ರಮಾಣಕ್ಕೆ ಕಡಿವಾಣ ಹಾಕುವಂತೆ ಸೂಚನೆ ನೀಡಲಾಗಿದೆ. ಮನೆ ಆರೈಕೆಯಲ್ಲಿರುವವರಿಗೆ ಟೆಲಿ ಮಾನಿಟರಿಂಗ್ ಮಾಡಬೇಕು. ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ಮಾಡಬೇಕು. ಅವರಿಗೆ ಆರೋಗ್ಯ ಕಿಟ್ಗಿಳನ್ನು ನೀಡಬೇಕು. ಪಾಸಿಟಿವ್ ಪ್ರಕರಣಗಳನ್ನು ಕಡಿಮೆ ಮಾಡಲು ಸಮೀಕ್ಷೆ ಮಾಡಿ ತಪಾಸಣೆ ಕೈಗೊಳ್ಳಿ ಎಂದು ಸೂಚನೆ ನೀಡಲಾಗಿದೆ ಎಂದರು.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್, ಕಂದಾಯ ಸಭೆ ಆರ್ ಅಶೋಕ್, ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.