ಕೊಪ್ಪಳ: ಡಿ.ಕೆ ಶಿವಕುಮಾರ ಅವರು ಅಹವಾಲದಲ್ಲಿ ಕಪ್ಪು ಹಣ ಸಿಕ್ಕು ಜೈಲಿಗೂ ಹೋಗಿ ಬಂದರೂ ಕೂಡ ಇನ್ನೂ ಬುದ್ದಿ ಬಂದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಆರೋಪಿಸಿದರು.
ಅವರು ಗುರುವಾರ ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಡಿಕೆಶಿ ನನ್ನನ್ನು ಯಾರು ಬಗ್ಗಿಸೋಕೆ ಆಗುವುದಿಲ್ಲ ಎಂಬ ಪ್ರಶ್ನೆಗೆ ಮಾತನಾಡಿದ ಅವರು, ಡಿಕೆಶಿಯನ್ನು ಬಗ್ಗಸ್ತಿರೋದು ಬಿಜೆಪಿಯವರಲ್ಲ. ಸಿಬಿಐದವರು, ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ದಾಳಿ ನಡೆಸುತ್ತಿರುವುದು ಬಿಜೆಪಿಯವರಲ್ಲ. ಸಿಬಿಐದವರೂ ಡಿಕೆಶಿಯವರು ಈ ಹಿಂದೆ ಹವಾಲಾ ದಂಧೆಯಲ್ಲಿ ತೊಡಗಿ ಸಿಕ್ಕಿಬಿದ್ದು ಜೈಲಿಗೆ ಹೋಗಿ ಬಂದ್ರೂ ಕೂಡ ಅವರಿಗೆ ಬುದ್ಧಿ ಬಂದಿಲ್ಲ.
ಆದರೆ ,ಜೈಲಿಗೆ ಹೋಗಿ ಬಂದು ಮತ್ತೆ ಅಕ್ರಮ ಆಸ್ತಿ ಮುಂದುವರಿಸಿದ್ದಕ್ಕೆ ಸಿಬಿಐ ದಾಳಿಯಾಗಿದೆ ಹೊರತು ಬಿಜೆಪಿಯ ಯಾವ ಕೈವಾಡವೂ ಇಲ್ಲ ಎಂದು ಹೇಳಿದರು.
ನಾಲ್ಕು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಗೆಲ್ಲಲಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆದರೂ ಬಿಜೆಪಿ ಗೆಲುವು ನಿಶ್ಚಿತ. ಎಂಎಲ್ಎ, ಎಂಪಿ ಉಪಚುನಾವಣೆಯಲ್ಲಿ ಗೆದ್ದಿದ್ದೇ ಇದಕ್ಕೆ ಸಾಕ್ಷಿ ಎಂದು ಅವರು ಅಭಿಪ್ರಾಯಪಟ್ಟರು.
ಶಾಲೆಗಳು ಆರಂಭ ಕುರಿತು ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಸದ್ಯ ಶಾಲೆಗಳು ಪ್ರಾರಂಭ ಆಗುವುದಿಲ್ಲ. ಈಗ ಕೇವಲ ಚರ್ಚೆ ನಡೆಯಿತಾ ಇದೆ ಅಷ್ಟೇ. ಶಾಲೆಗಳ ಪ್ರಾರಂಭ ಕುರಿತು ನಿಗದಿಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಈ ವೇಳೆ ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಈಶಾನ್ಯ ಪದವಿರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ, ದೊಡ್ಡನಗೌಡ ಪಾಟೀಲ್, ಸಿ.ವಿ.ಸಂದ್ರಶೇಖರ, ಮತ್ತಿತರರು ಇದ್ದರು.