ಹಥ್ರಾಸ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಮೊರೆ

ನವದೆಹಲಿ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದ ಯುವತಿಯ ಮೇಲೆ ಅತ್ಯಾಚಾರ ಹಾಗೂ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಕೋರಿ ಎನ್‍ಜಿಒವೊಂದು ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಈ ಕುರಿತು ಅರ್ಜಿ ಸಲ್ಲಿಸಿದ ಈ ಸಂಸ್ಥೆ, ಪ್ರಕರಣದ ನಿಷ್ಪಕ್ಷಪಾತ ತನಿಖೆಯ ವಿಚಾರವಾಗಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಅರ್ಜಿ ವಿಚಾರಣೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಬೇಕು ಎಂದು ಮನವಿ ಮಾಡಿದೆ.
ಈ ಘಟನೆಯಲ್ಲಿ ಅಧಿಕಾರಿಗಳು ಸಾಕ್ಷ್ಯಗಳನ್ನು ತಿರುಚುವ ಕೆಲಸ ಮಾಡುತ್ತಿದೆ. ಹಾಗಾಗಿ, ಶೀಘ್ರವೇ ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ