ಶಿವಮೊಗ್ಗ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಆಗುತ್ತಿದೆ. ಇದರಿಂದಾಗಿ ಮತ್ತೊಮ್ಮೆ ಭದ್ರಾ ಜಲಾಶಯ ಭರ್ತಿಯಾಗಿದ್ದು, ಕ್ರಸ್ಟ್ ಗೇಟ್ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ.
ಗರಿಷ್ಠ 186 ಅಡಿ ಹೊಂದಿರುವ ಭದ್ರಾ ಜಲಾಶಯ ಕಳೆದ ತಿಂಗಳು ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಅಣೆಕಟ್ಟೆಯಿಂದ ನೀರು ಹೊರಬಿಡಲಾಗಿತ್ತು. ನಂತರ ಒಳ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ನಾಲೆಗಳಿಗೆ ಮಾತ್ರ ನೀರನ್ನು ಹರಿಸಲಾಗುತ್ತಿತ್ತು.
ಬುಧವಾರ ಸಂಜೆ ವೇಳೆಗೆ ಅಣೆಕಟ್ಟೆಗೆ 6600 ಕ್ಯೂಸೆಕ್ಸ್ ನೀರು ಹರಿದು ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಪುನಃ ಗೇಟ್ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ. ಒಟ್ಟು 7,600 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ.
ಆಗುಂಬೆಯಲ್ಲಿ ಭಾರೀ ಮಳೆ: ಕೃಷಿಕರಲ್ಲಿ ಆತಂಕ