ಖಾತೆ ಬದಲಾವಣೆ ಮುಖ್ಯಮಂತ್ರಿ ಪರಮಾಕಾರ

ಬೆಳಗಾವಿ : ಸಚಿವರ ಖಾತೆಗಳ ಬದಲಾವಣೆ ಮಾಡುವ ಅಕಾರ ಮುಖ್ಯಮಂತ್ರಿ ಅವರಿಗಿದೆ. ವರಿಷ್ಠರ ಜತೆಗೆ ಚರ್ಚಿಸಿಯೇ ಸಿಎಂ ಈ ತೀರ್ಮಾನ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಅವರು ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಮಧ್ಯೆ ಹೊಂದಾಣಿಕೆ ಇಲ್ಲ ಎನ್ನುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪದಲ್ಲಿ ಯಾವುದೇ ಹರುಳಿಲ್ಲ. ರಾಜಕೀಯಕ್ಕಾಗಿ ಈ ಹೇಳಿಕೆ ನೀಡಿರಬಹುದು ಎಂದರು.
ಇಲಾಖೆ ಬದಲಾದರೇ ಅಸಮರ್ಥರು ಅಂತಲ್ಲ. ಒಳ್ಳೆಯ ಕೆಲಸ ಆಗಬೇಕು ಅಂತಾ ವರಿಷ್ಠರು ತೀರ್ಮಾನ ಮಾಡಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಗಳಿದ್ದಾಗ ಎರಡು ವರ್ಷ ಡಿಕೆಶಿಯನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಂಡಿರಲಿಲ್ಲ. ಹಾಗಾದರೆ, ಡಿಕೆಶಿ ಅಸಮರ್ಥರು ಅನ್ನುವ ಕಾರಣಕ್ಕೆ ಬಿಟ್ಟಿದ್ದರಾ? ಕೆಲ ಸನ್ನಿವೇಶದಲ್ಲಿ, ಸಂದರ್ಭದಲ್ಲಿ ಬದಲಾವಣೆ ಮಾಡಬೇಕಾಗುತ್ತದೆ.
ಆರ್‍ಆರ್ ನಗರ ಮತ್ತು ಶಿರಾ ಎರಡೂ ಕ್ಷೇತ್ರದ ಉಪಚುನಾವಣೆಯಲ್ಲಿ ನಮಗೆ ಗೆಲ್ಲುವ ಅವಕಾಶ ಹೆಚ್ಚಿದೆ. ಉಪಚುನಾವಣೆಗಳಲ್ಲಿ ಆಡಳಿತ ಪಕ್ಷದ ಅಭ್ಯರ್ಥಿಗಳನ್ನೇ ಆಯ್ಕೆ ಮಾಡುವ ಮನೋಭಾವ ರಾಜ್ಯದ ಜನರಿಗಿದೆ. ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತರ ಪಡೆ ದೊಡ್ಡದಿದೆ. ಮತದಾರರ ಒಲವು ಬಿಜೆಪಿ ಕಡೆಯಿದ್ದು, ಎರಡು ಕಡೆ ಗೆಲ್ಲಲು ಅವಕಾಶ ಇದೆ ಎಂದರು.
ಕೊರೋನಾ ಸೋಂಕಿನಿಂದ ಮೃತಪಟ್ಟ ಸಾರಿಗೆ ಇಲಾಖೆಯ ಸಿಬ್ಬಂದಿಯ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಒದಗಿಸಲಾಗುವುದು. ಈ ಬಗ್ಗೆ ಆರ್ಥಿಕ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ. ಹಣಕಾಸಿನ ಸಮಸ್ಯೆಯಿಂದಾಗಿ ಪರಿಹಾರ ಬಿಡುಗಡೆ ವಿಳಂಬವಾಗಿದೆ. ಐವತ್ತು ಜನ ಸಿಬ್ಬಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರ ಪ್ರತೀ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ತಲುಪಿಸಲಾಗುವುದು ಎಂದರು.
ಕೊರೋನಾ ಪರಿಣಾಮ ಸಾರಿಗೆ ಇಲಾಖೆ ಈಗಲೂ ನಷ್ಟದಲ್ಲಿದೆ. ಈಗ ಬರುತ್ತಿರುವ ಆದಾಯ ಡೀಸೆಲ್‍ಗೆ ಮಾತ್ರ ಸಾಲುತ್ತಿದೆ. ಆದಾಯವಿಲ್ಲ ಎಂದು ಬಸ್?ಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಮೂರು ಸಾವಿರ ಕೋಟಿಗೂ ರೂ. ಅಕ ನಷ್ಟವನ್ನು ಸಾರಿಗೆ ಇಲಾಖೆ ಅನುಭವಿಸುತ್ತಿದೆ. ಹೀಗಾಗಿ ಸಿಬ್ಬಂದಿ ಸಂಬಳ 8-10 ದಿನ ತಡವಾಗುತ್ತಿದೆ. ಸದ್ಯ ಸಾರಿಗೆ ಇಲಾಖೆಯಲ್ಲಿ 1 ಲಕ್ಷ 30 ಸಾವಿರ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಕಳೆದ ವರ್ಷ ಮತ್ತು ಪ್ರಸಕ್ತ ಸಾಲಿನ ಅತಿವೃಷ್ಟಿಯ ಪರಿಹಾರ ಕುರಿತು ಸಿಎಂ ಗಮನಕ್ಕೆ ತರಲಾಗಿದೆ. ಕೃಷಿ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಸರ್ವೆ ಮಾಡುತ್ತಿವೆ. ರೈತರ ಬಗ್ಗೆ ಸಿಎಂ ವಿಶೇಷ ಕಾಳಜಿ ಹೊಂದಿದ್ದಾರೆ. ಆದರೆ ಪರಿಸ್ಥಿತಿ ಯಡಿಯೂರಪ್ಪರನ್ನು ಕಟ್ಟಿ ಹಾಕಿದೆ. ಸರ್ಕಾರಕ್ಕೆ ಬರುತ್ತಿರುವ ಆದಾಯದಲ್ಲಿ ಕೊರತೆ ಆದಾಗ ತಕ್ಷಣ ಪರಿಹಾರ ಕೊಡಲು ಕಷ್ಟವಾಗಿದೆ. ಕೊರೋನಾದಿಂದ ಆರ್ಥಿಕ ವ್ಯವಸ್ಥೆ ಮೇಲೆ ಬಹಳಷ್ಟು ದುಷ್ಪರಿಣಾಮ ಬೀರಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 33 ಸಾವಿರ ಕೋಟಿ ರೂ. ಸಾಲ ಕೊಡಲು ಮುಂದಾಗಿದೆ. ಹಣ ಬಂದ ಕೂಡಲೇ ಎಲ್ಲಾ ಸಮಸ್ಯೆಗಳು ಪರಿಹರಿಸಿಕೊಳ್ಳಲು ಸಾಧ್ಯ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ