ರಾಜ್ಯಗಳಿಗೆ ಜಿಎಸ್‍ಟಿ ಪರಿಹಾರ ಘೋಷಿಸಿದ ಕೇಂದ್ರ

ಹೊಸದಿಲ್ಲಿ: ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಸಂಗ್ರಹ ಕೊರತೆಯನ್ನು ನೀಗಿಸುವುದಕ್ಕಾಗಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 1,10,208 ಕೋಟಿ ರೂ.ಗಳ ಜಿಎಸ್‍ಟಿ ಪರಿಹಾರವನ್ನು ಹಣಕಾಸು ಸಚಿವಾಲಯ ಗುರುವಾರ ಘೋಷಿಸಿದ್ದು, ಕರ್ನಾಟಕಕ್ಕೆ 12,407 ಕೋಟಿ ರೂ.ಗಳ ಪರಿಹಾರವನ್ನು ನೀಡಿದೆ.
ಜಿಎಸ್‍ಟಿ ಸಂಗ್ರಹದ ಕೊರತೆ ನೀಗಿಸುವುದಕ್ಕಾಗಿ ಕೇಂದ್ರ ಸರ್ಕಾರ ರಾಜ್ಯಗಳ ಪರವಾಗಿ 1.1 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ ಹಣಕಾಸು ವರ್ಷದಿಂದ ಉಂಟಾದ ಆರ್ಥಿಕ ಕುಸಿತವು ಜಿಎಸ್‍ಟಿ ಸಂಗ್ರಹಗಳಲ್ಲಿ ಇಳಿಕೆಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಮಾರಾಟ ತೆರಿಗೆ ಅಥವಾ ವ್ಯಾಟ್‍ನ್ನು ವಿಸುವ ಹಕ್ಕನ್ನು ಬಿಟ್ಟುಕೊಟ್ಟಿದ್ದರಿಂದ ರಾಜ್ಯಗಳು ಕೊರತೆ ಅನುಭವಿಸಬೇಕಾಯಿತು.
ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರದಿಂದ ನೀಡಲಾಗಿದ್ದ ಎರಡು ಸಾಲ ಆಯ್ಕೆಗಳ ಸಲಹೆಯಲ್ಲಿ ಒಂದನ್ನು 21 ರಾಜ್ಯಗಳು ಸ್ವೀಕರಿಸಿವೆ. ಇದೇ ವೇಳೆ ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಆಡಳಿತವಿರುವ ರಾಜ್ಯಗಳು ಸಾಲ ಆಯ್ಕೆಯ ಪ್ರಸ್ತಾಪವನ್ನು ಸ್ವೀಕರಿಸಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ