ತೆಲಂಗಾಣ, ಮಹಾರಾಷ್ಟ್ರದಲ್ಲಿ ಭಾರಿ ಮಳೆ: 53 ಮಂದಿ ಸಾವು

ಹೈದರಾಬಾದ್: ಸತತ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ತೆಲಂಗಾಣ ಹಾಗೂ ಮಹಾರಾಷ್ಟ್ರ ತತ್ತರಿಸಿಹೋಗಿದ್ದು , ತೆಲಂಗಾಣದಲ್ಲಿ ಮಳೆಯಿಂದಾಗಿ 50 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, ಮಹಾರಾಷ್ಟ್ರದಲ್ಲಿ ಮೂವರು ನೀರಿನಲ್ಲಿ ಕೊಚ್ಚಿಹೋಗಿದ್ದು, ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ.
ಹೈದರಾಬಾದ್‍ನಲ್ಲೇ 25 ಮಂದಿ ಮೃತರಾಗಿದ್ದಾರೆ, ಮಳೆಯಿಂದಾಗಿ ರಾಜ್ಯ ರಾಜಧಾನಿ ಅಕ್ಷರಶಃ ನಲುಗಿಹೋಗಿದ್ದು, ಈ ವರೆಗೆ 5 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿಕೆ. ಚಂದ್ರಶೇಖರ್ ರಾವ್ ಪರಿಶೀಲನಾ ಸಭೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರಸರ್ಕಾರದ ನೆರವು ಕೋರಿರುವುದಾಗಿಯೂ ಹೇಳಿದ್ದಾರೆ. ಮತೊಂದೆಡೆ ಭಾರಿ ಮಳೆಯಿಂದಾಗಿ ಮಹಾರಾಷ್ಟ್ರದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಪೀಡಿತ ಸೋಲಾಪುರ ಜಿಲ್ಲೆಯಿಂದ 8 ಸಾವಿರಕ್ಕೂ ಅಕ ಮಂದಿಯನ್ನು ಸುರಕ್ಷಿತಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಪಂಡರಾಪುರ ನದಿ ತೀರದಲ್ಲಿ ವಾಸಿಸುವ 8,400ಕ್ಕೂ ಅಕಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ