ರಾಜ್ಯ ಸಾರಿಗೆ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾಣೆಗೆ ಪ್ರಶಂಸೆ

ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಸಾರಿಗೆ ವ್ಯವಸ್ಥೆಯಲ್ಲಿ ಕೈಗೊಂಡ ವ್ಯಾಪಕ ಸುಧಾರಿತ ಕ್ರಮಗಳಿಂದಾಗಿ ವಾಹನ ಅಪಘಾತಗಳಿಗೆ ಕಡಿವಾಣ ಹಾಕಲಾಗಿರುವ ಬಗ್ಗೆ ಕೇಂದ್ರ ಭೂ ಸಾರಿಗೆ, ಹೆಧಾರಿ ಹಾಗೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಪ್ರಶಂಸೆ ವ್ಯಕ್ತಪಡಿಸಿಧಾರೆ.
ರಾಜ್ಯದ ಸಾರಿಗೆ ಸುಧಾರಣೆಯ ಕುರಿತು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ವರ್ಚುವಲ್ ಸಭೆ ನಡೆಸಿ ಮಾಹಿತಿ ಪಡೆದುಕೊಂಡ ಅವರು, ಸದ್ಯದಲ್ಲಿಯೇ ಹೊಸದಿಲ್ಲಿಯಲ್ಲಿ ಮತ್ತೊಮ್ಮೆ ಸಭೆ ನಡೆಸಿ ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಜಾರಿಗೊಳಿಸಲಿರುವ ಸಾರಿಗೆ ಮತ್ತು ಹೆಧಾರಿ ವಿಸ್ತರಣೆ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಭರವಸೆ ನೀಡಿದರು.
ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಟೆಕ್ನಾಲಜಿ ಆಧಾರಿತ ವಿಎಲ್‍ಟಿಎಸ್ – (ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಸಿಸ್ಟಂ – ಗಿಐಖಿ) ಅಳವಡಿಕೆಯನ್ನು ಜಾರಿಗೆ ತಂದು ರಸ್ತೆ ಸುರಕ್ಷತೆಗೆ ಹೆಚ್ಚು ಮಹತ್ವ ನೀಡಲು ನಮ್ಮ ಸರ್ಕಾರ ಅನೇಕ ನೂತನ ಕಾರ್ಯ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಅದಲ್ಲದೇ, ವಾಹನಗಳ ವೇಗವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದ ಹಾಗೂ ಉಚ್ಛ-ನ್ಯಾಯಾಲಯದ ನಿರ್ದೇಶನದಂತೆ ವಾಹನಗಳಿಗೆ ಸ್ಪೀಡ್ ಗೌರ್ನರ್‍ಗಳನ್ನು ಅಳವಡಿಸಲಾಗುತ್ತಿದೆ ಎಂದು ಸವದಿ ಅವರು ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ