ಮೈಸೂರಿನಲ್ಲಿ ಬಿಜೆಪಿ ಸಂಕಲ್ಪಯಾತ್ರೆಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಚಾಲನೆ 224 ವಿಧಾನ ಸಭಾ ಕ್ಷೇತ್ರದಲ್ಲೂ ಗೆಲುವಿನ ಗುರಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರದಲ್ಲೂ ಗೆಲುವು ಸಾಸುವ ಸಂಕಲ್ಪದೊಂದಿಗೆ ಪಕ್ಷದ ಸಂಘಟನಾ ಯಾತ್ರೆಯನ್ನು ಮೈಸೂರಿನಿಂದ ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲು ತಿಳಿಸಿದರು.
ಗುರುವಾರ ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಮೊದಲ ಬಾರಿಗೆ ಏರ್ಪಡಿಸಿದ್ದ ಪಕ್ಷದ ರಾಜ್ಯಪದಾಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನ ಆರ್.ಆರ್.ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರ ಮತ್ತು ವಿಧಾನಪರಿಷತ್‍ನ ನಾಲ್ಕೂ ಕ್ಷೇತ್ರದಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿರಾದಲ್ಲೂ ಬಿಜೆಪಿಗೆ ಮತದಾರರ ಒಲವು:
ಶಿರಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ, ಅಲ್ಲಿ ಮತದಾರರ ಒಲವು ಬಿಜೆಪಿಗೆ ವ್ಯಕ್ತವಾಗುತ್ತಿದೆ. ಸಾವಿರಾರು ಮಂದಿ ಮುಖಂಡರು ಬೇರೆ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಹಾಗಾಗಿ ಆರ್.ಆರ್.ನಗರ, ಶಿರಾ ಕ್ಷೇತ್ರ ಮತ್ತು ನಾಲ್ಕು ವಿಧಾನಪರಿಷತ್ ಕ್ಷೇತ್ರದಲ್ಲಿ ಸಂಘಟನಾ ಶಕ್ತಿಯಿಂದಲೇ ಬಿಜೆಪಿ ಗೆಲ್ಲಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಗೆ ಚುನಾವಣೆ ಎದುರಿಸುವ ಶಕ್ತಿ ಇಲ್ಲ:
ತನ್ನ ಪಕ್ಷದ ಶಾಸಕನನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ. ಪರಿಶಿಷ್ಟ ಜಾತಿಗೆ ಸೇರಿದ ಶಾಸಕನ ಮನೆಗೆ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ಸಿಗರೇ ಮಾಡಿದ್ದಾರೆ. ಅವರನ್ನು ಬಂಸಿ ಅಂತ ಹೇಳಲು ಆ ಪಕ್ಷದ ಅಧ್ಯಕ್ಷರಿಗೆ ಆಗುತ್ತಿಲ್ಲ. ಇಂಥವರು ಚುನಾವಣೆಯನ್ನು ಹೇಗೆ ಎದುರಿಸುತ್ತಾರೆ ಎಂದು ಪ್ರಶ್ನಿಸಿದರು.
ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಎಂಎಲ್ ಸಿ ಎಚ್.ವಿಶ್ವನಾಥ್, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಪ್ರಧಾನ ಕಾರ್ಯದರ್ಶಿ ಎಚ್.ಜಿ.ಗಿರಿಧರ್ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಭಾಗವಹಿಸಿದ್ದ ಪದಾಕಾರಿಗಳು
ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣ, ಸಿದ್ದರಾಜು, ಎಂ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ಅಶ್ವಥ್‍ನಾರಾಯಣ, ಮಹೇಶ್‍ಟೆಂಗಿನಕಾಯಿ, ಸಂಘಟನಾ ಪ್ರಧಾನಕಾರ್ಯದರ್ಶಿ ಬಿ.ಪಿ.ಅರುಣ್ ಕುಮಾರ್, ಕಾರ್ಯದರ್ಶಿಗಳು, ಕೋಶಾಧ್ಯಕ್ಷರು, ವಕ್ತಾರರು, ಪ್ರಕೋಷ್ಠಗಳ ರಾಜ್ಯ ಸಂಯೋಜಕರು ಸಭೆಯಲ್ಲಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ