ಬೆಂಗಳೂರು: ರಾಜ್ಯದ ಹಲವು ಪ್ರದೇಶದಲ್ಲಿ ಅತಿವೃಷ್ಟಿಯಿಂದಾಗಿರುವ ಅನಾಹುತಗಳ ಸಮೀಕ್ಷೆ ನಡೆಸುವುದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅ.21 ರಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ಭೇಟಿ ನೀಡಿದ್ದ ಸಿಎಂ, ಇದೀಗ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿದ್ದು, ಅ.20 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲೇ ಇರಲಿದ್ದಾರೆ. ಅ.19 ರ ಸೋಮವಾರದಂದು ಕಲ್ಲುವಡ್ಡು ಹಳ್ಳಿ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದು, ಉಡುತಡಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಅ.20 ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಶಿಕಾರಿಪುರದ ಸಾಂಸ್ಕøತಿಕ ಭವನದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ. ಸಂಜೆ 4 ಗಂಟೆ ವೇಳೆಗೆ ಬೆಂಗಳೂರಿಗೆ ತೆರಳಲಿದ್ದಾರೆ.