ಬೀದರ: ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆ ನಾಶವಾಗಿರುವ ರೈತರಿಗೆ ಶೀಘ್ರ ಪರಿಹಾರ ಒದಗಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದರು.
ಅವರು ಸೋಮವಾರ ಜಿಲ್ಲೆಯ ಬೀದರ ದಕ್ಷಿಣ ಕ್ಷೇತ್ರದ ಬಗದಲ್ ಗ್ರಾಮಕ್ಕೆ ಬೆಳೆ ಹಾನಿ ಸಂಭವಿಸಿದ ಹೊಲಗದ್ದೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾಗಿ ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಲ್ಲಿ ಬೆಳೆ ಹಾನಿ ಸಂಭವಿಸಿದೆ ಬೆಳೆ ಕೈಗೆ ಬರದ ಕಾರಣ ರೈತರಿಗೆ ಆರ್ಥಿಕವಾಗಿ ನಷ್ಟ ಸಂಭವಿಸಿದೆ, ಬೆಳೆ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬೀದರ ಸಂಸದ ಭಗವಂತ ಖೂಬಾ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.