ಶೋಪಿಯಾನ್ (ಜಮ್ಮು ಕಾಶ್ಮೀರ): ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.
ಶೋಪಿಯಾನ್ ಜಿಲ್ಲೆಯ ಮೆಲ್ಹೂರಾ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದ್ದು, 55ನೇ ರಾಷ್ಟ್ರೀಯ ರೈಫಲ್ಸ್ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ಖಚಿತ ಮಾಹಿತಿ ಆಧರಿಸಿ ಜಂಟಿ ಕಾರ್ಯಾಚರಣೆ ನಡೆಸಿವೆ. ನಿಖರ ಮಾಹಿತಿ ಮೇರೆಗೆ ದಾಳಿ ನಡೆದಿದ್ದು, ಅವಿತುಕೊಂಡಿದ್ದ ಉಗ್ರರು ಸೇನೆಯ ಕಡೆಗೆ ಗುಂಡು ಹಾರಿಸಿದ್ದರು ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿದ್ದ ಸಿಆರ್ಪಿಎಫ್ ಹಾಗೂ ಪೆÇಲೀಸ್ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಓರ್ವ ಸಿಆರ್ಪಿಎಫ್ ಯೋಧ ಗಾಯಗೊಂಡಿದ್ದರು.