ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: 8,005 ಡಿಸ್ಚಾರ್ಜ್, 5,018 ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಇಂದು 5,018 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,70,604ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 64 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,542ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,481 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,10,021ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 17 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ಇಂದು 8,005 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,53,829ಕ್ಕೆ ಏರಿಕೆಯಾಗಿದೆ. 1,06,214 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 945 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ