ಭತ್ತಕ್ಕೆ ಬೆಂಬಲ ಬೆಲೆ ನೀಡಿ ಖರೀದಿ

ಬೆಂಗಳೂರು: 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು.
ಬೆಂಬಲ ಬೆಲೆ ಯೋಜನೆಯಡಿ ಆಹಾರಧಾನ್ಯಗಳನ್ನು ಸಂಗ್ರಹಿಸುವ ಕುರಿತು ಗುರುವಾರದಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಬಗ್ಗೆ ಸುದಿರ್ಘ ಚರ್ಚೆ ನಡೆಯಿತು.
ಪ್ರತಿ ರೈತರಿಂದ ಪ್ರತಿ ಎಕರೆಗೆ 16 ಕ್ವಿಂಟಾಲ್ ನಂತೆ ಗರಿಷ್ಟ 40 ಕ್ವಿಂಟಾಲ್ ಭತ್ತವನ್ನು ಖರೀದಿಸಲು ನಿರ್ಣಯಿಸಿದ್ದು, ಮುಂದಿನ ತಿಂಗಳಿನಿಂದಲೇ ರೈತರ ನೊಂದಣಿ ಕಾರ್ಯ ಪ್ರಾರಂಭಿಸಿ ತದನಂತರ ಖರೀದಿಸಲಾಗುತ್ತದೆ.
ಅಷ್ಟೇ ಅಲ್ಲದೆ, ಹೆಚ್ಚುವರಿಯಾಗಿ 1ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲೂ ಒಪ್ಪಿಗೆ ಸೂಚಿಸಲಾಗಿದೆ.
ಆವರ್ತನಿಯಿಂದ 300 ಕೋಟಿ ರೂ.
ಅಗತ್ಯವಿರುವ ಅನುದಾನವನ್ನು ರಾಜ್ಯದ ಆವರ್ತ ನಿಯಿಂದ 300 ಕೋಟಿ ರೂ. ಬಿಡುಗಡೆ ಮಾಡುವುದು ಹಾಗೂ ಬೇಡಿಕೆಗೆ ಅನುಗುಣವಾಗಿ ಸಂಗ್ರಹಣಾ ಏಜೆನ್ಸಿಗಳಿಗೆ ಅನುದಾನ ಬಿಡುಗಡೆ ಮಾಡುವುದು. ಕೇಂದ್ರ ಸರ್ಕಾರವು ನಿಗದಿಪಡಿಸಿರುವಂತೆ ವಿವಿಧ ವೆಚ್ಚಗಳನ್ನು ಅಕ್ಕಿ ಗಿರಣಿಗಳ ಮಾಲೀಕರುಗಳಿಗೆ ನೀಡುವುದು ಮತ್ತು ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಕ್ರಮ ವಹಿಸುವುದು.
ಸಹಕಾರ ಮಾರಾಟ ಮಹಾಮಂಡಳದಿಂದ ಖರೀದಿ
ಕರ್ನಾಟಕ ರಾಜ್ಯ ಉಗ್ರಾಣ ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಿಸುವ ಪ್ರಕ್ರಿಯೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಕೈಬಿಟ್ಟು, ಈ ಏಜೆನ್ಸಿಗೆ ನಿಯೋಜಿಸಿದ ಜಿ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಚಿಕ್ಕಮಗಳೂರು ಜಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಗೆ ವಹಿಸಲು ತೀರ್ಮಾನಿಸಿದೆ.
2019-20ನೇ ಸಾಲಿನಲ್ಲಿ ಸಂಗ್ರಹಣಾ ಏಜೆನ್ಸಿಗಳಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ 27 ಕೋಟಿ ರೂ., ಕರ್ನಾಟಕ ರಾಜ್ಯ ಉಗ್ರಾಣ ನಿಗಮಕ್ಕೆ 21 ಕೋಟಿ ರೂ. ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಕ್ಕೆ 8 ಕೋಟಿ ರೂ. ಸೇರಿ ಒಟ್ಟು 56 ಕೋಟಿ ರೂ. ಬಾಕಿಯನ್ನು ಆವರ್ತ ನಿಯಿಂದ ಭರಿಸಲಾಗುತ್ತದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ