ಕಲ್ಲಿದ್ದಲು ಹಗರಣ : ದಿಲೀಪ್ ರೇ ಗೆ 3 ವರ್ಷ ಜೈಲು

ರಾಂಚಿ : 1999ರ ಜಾರ್ಖಂಡ್ ಕಲ್ಲಿದ್ದಲು ಹಗರಣಕ್ಕೆ ಸಂಬಂಸಿದಂತೆ ಇತ್ತೀಚೆಗಷ್ಟೇ ಅಪರಾ ಎಂಬು ಘೊಷಿಸಲ್ಪಟ್ಟಿದ್ದ ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಸಿಬಿಐ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆ ವಿಸಿದೆ.

ಪ್ರಕರಣ ಸಂಬಂಸಿದಂತೆ ವಿಚಾರಣೆ ನಡೆಸುತ್ತಿದ್ದ ನ್ಯಾಯಾಲದಲ್ಲಿ ಕಳೆದ ವಾರ ರೇ ವಿರುದ್ಧದ ಆರೋಪ ಸಾಬೀತಾಗಿದೆ. ಈ ಹಿನ್ನೆಲೆ ಸೋಮವಾರ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

ಕಲ್ಲಿದ್ದಲು ಇಲಾಖೆಯ ಕೇಂದ್ರ ಖಾತೆ ರಾಜ್ಯ ಸಚಿವರಾಗಿದ್ದಾಗ ರೇ ಜಾರ್ಖಂಡ್‍ನ ಗಿರಿದಿಹ್ ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಯಾಕ್ ಅನ್ನು 1999ರಲ್ಲಿ ಕ್ಯಾಸ್ಪ್ಯಾನ್ ಟೆಕ್ನಾಲಜೀಸ್ ಲಿಮೀಟಿಡ್‍ಗೆ ಅಕ್ರಮವಾಗಿ ಹಂಚಿಕೆ ಮಾಡಿದ್ದರು ಎಂದು ಆರೋಪಿಸಲಾಗಿತು.

ಹಣಗರಣದಲ್ಲಿ ಭಾಗಿಯಾದ ಹಿನ್ನೆಲೆ ರೇ ಜತೆಗೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಅಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ, ನಿತ್ಯಾನಂದ್ ಗೌತಮ ಹಾಗೂ ಕ್ಯಾಸ್ಪ್ಯಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ)ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್‍ವಾಲ್ ಅವರಿಗೂ ಮೂರು ವರ್ಷ ಶಿಕ್ಷೆ ವಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ