ಅಕಾರಿಗಳೊಂದಿಗೆ ಸಭೆ ನಡೆಸಿ ಭರವಸೆ ನೀಡಿದ ಸಂಸದ ಬಿ.ವೈ ರಾಘವೇಂದ್ರ ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಆತಂಕ ಬೇಡ

ಭದ್ರಾವತಿ: ನಗರದ ವಿಐಎಸ್‍ಎಲ್ ಕಾರ್ಖಾನೆಯ ವಸತಿ ಗೃಹಗಳಲ್ಲಿ ವಾಸವಾಗಿರುವ ನಿವೃತ್ತ ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದರು.
ವಿಐಎಸ್‍ಎಲ್ ಅತಿಥಿ ಗೃಹದಲ್ಲಿ ಕಾರ್ಖಾನೆಯ ಅಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕಾರ್ಖಾನೆಯ ನಗರಾಡಳಿತ ಇಲಾಖೆ ವಿರುದ್ಧ ಇತ್ತೀಚೆಗೆ ನಿವೃತ್ತ ಕಾರ್ಮಿಕರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿರುವ ಮಾಹಿತಿ ತಿಳಿದು ಬಂದಿದೆ. ಪ್ರಸ್ತುತ ನಿಗದಿಪಡಿಸಲಾಗಿರುವ ಬಾಡಿಗೆ ದರ ಕಡಿಮೆಗೊಳಿಸಲು ಕಾರ್ಖಾನೆ ಆಡಳಿತ ಮಂಡಳಿಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಮುಂದಿನ 6 ವರ್ಷಗಳವರೆಗೆ ಬಾಡಿಗೆ ದರ ಹೆಚ್ಚಳ ಮಾಡದಂತೆ ಸೂಚಿಸಲಾಗಿದೆ ಎಂದರು.
ಉಳಿದಂತೆ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಬದಲಾವಣೆಗಳಾದರೂ ಅಥವಾ ಸಮಸ್ಯೆಗಳು ಎದುರಾದಲ್ಲಿ ಸಹ ನಿವೃತ್ತ ಕಾರ್ಮಿಕರ ಪರವಾಗಿ ಇರುವುದಾಗಿ ಭರವಸೆ ನೀಡಿದರು.
ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಕಾರ್ಯಚಟುವಟಿಗಳನ್ನು ಖಾಸಗಿಯವರಿಗೆ ವಹಿಸಿಕೊಡುವ ಪ್ರಕ್ರಿಯೆಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಟೆಂಡರ್ ಸಹ ಅಂತಿಮಗೊಂಡಿದೆ. ಈ ಹಿನ್ನಲೆಯಲ್ಲಿ ವಸತಿ ಗೃಹಗಳಲ್ಲಿ ವಾಸವಿರುವ ಕಾರ್ಮಿಕರನ್ನು ಖಾಲಿ ಮಾಡಲು ಅಲ್ಲಿನ ನಗರಡಳಿತ ಇಲಾಖೆ ಸೂಚಿಸಿದ್ದು, ಶೀಘ್ರದಲ್ಲಿಯೇ ಕಾರ್ಖಾನೆಯಲ್ಲಿ ಕಾರ್ಯಚಟುವಟಿಕೆಗಳು ಪುನಃ ಆರಂಗೊಳ್ಳಲಿವೆ ಎಂದರು.
ಪತ್ರಿಕಾಭವನಕ್ಕೆ 50 ಲಕ್ಷ ರೂ. ನೆರವು:
ಹಳೇನಗರದ ಕಾರ್ಯನಿರತರ ಪತ್ರಕರ್ತರ ಸಂಘದ ಪತ್ರಿಕಾಭವನದಲ್ಲಿ ಮುಂದುವರೆದ ಅಭಿವೃದ್ಧಿ ಕಾಮಗಾರಿಗಳಿಗೆ 50 ಲಕ್ಷ ರೂ. ಅನುದಾನ ನೀಡುವುದಾಗಿ ಸಂಸದರು ಭರವಸೆ ನೀಡಿದರು.
ಪತ್ರಿಕಾ ಭವನ ಕಟ್ಟಡ ಸಮಿತಿ ಅಧ್ಯಕ್ಷ, ಹಿರಿಯ ಪತ್ರಕರ್ತ ಕಣ್ಣಪ್ಪ ನೇತೃತ್ವದಲ್ಲಿ ಸುಮಾರು 1 ಕೋಟಿ ರೂ. ಅನುದಾನಕ್ಕೆ ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಸಂಸದರು ಸದ್ಯಕ್ಕೆ 50 ಲಕ್ಷ ರೂ. ಅನುದಾನ ನೀಡಲಾಗುವುದು. ಕಾಮಗಾರಿ ಮುಕ್ತಾಯದ ನಂತರ ಮುಂದಿನ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳುವುದು ಎಂದರು.
ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್‍ಪ್ರೈಸಸ್ ಸಂಸ್ಥೆ ರಾಜ ಎಚ್.ಸಿ ರಮೇಶ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ಬಿಜೆಪಿ ಪಕ್ಷದ ಪ್ರಮುಖರಾದ ಎಂ. ಪ್ರಭಾಕರ್, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಪಿ. ಗಣೇಶ್‍ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ