ರಾಷ್ಟ್ರೀಯ ಏಕತಾ ದಿನ: ಪಟೇಲ್ ಬಗ್ಗೆ ವೆಬಿನಾರ್

ಬೆಂಗಳೂರು: ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರು ವಾರ್ತಾ ಶಾಖೆ ಅಕ್ಟೋಬರ್ 29ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಕುರಿತು ವೆಬಿನಾರ್ ಆಯೋಜಿಸಿದೆ.
ಅಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರವರೆಗೆ ವೆಬಿನಾರ್ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್ ಹಾಗೂ ಹಿರಿಯ ಪತ್ರಕರ್ತ, ಮಿಥಿಕ್ ಸೊಸೈಟಿಯ ವ್ಯವಸ್ಥಾಪಕ ಸದಸ್ಯ ದು.ಗು. ಲಕ್ಷ್ಮಣ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ