ನ. 30ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ರದ್ದು

ಹೊಸದಿಲ್ಲಿ: ಕೊರೋನಾ ಹಿನ್ನೆಲೆ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನವನ್ನು ನವೆಂಬರ್ 30ರವರೆಗೆ ರದ್ದುಗೊಳಿಸಿ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಬುಧವಾರ ತಿಳಿಸಿದೆ.
ಪ್ರಕರಣದ ತೀವ್ರತೆಯನ್ನು ಆಧರಿಸಿ ಕೆಲ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಬಹುದು ಎಂದು ಭಾರತೀಯ ವಿಮಾನಯಾನ ನಿಯಂತ್ರಕವು ಅಸೂಚನೆಯಲ್ಲಿ ಹೇಳಿದೆ. ಕೊರೋನಾ ನಿಯಂತ್ರಣಕ್ಕಾಗಿ ದೇಶದಲ್ಲಿ ಮಾರ್ಚ್ 23ರಿಂದ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಆದರೆ, ವಂದೇ ಭಾರತ್ ಮಿಷನ್‍ನಲ್ಲಿ ಮೇಯಿಂದ ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರಲು ವಿಶೇಷ ಅಂತಾರಾಷ್ಟ್ರೀಯ ವಿಮಾನಗಳು ಕಾರ್ಯನಿರ್ವಹಿಸಿದ್ದವು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ