ಡ್ರಗ್ ದಂಧೆ ಪ್ರಕರಣ: ಸಿಪಿಎಂ ನಾಯಕನ ಪುತ್ರ ಇ.ಡಿ. ವಶಕ್ಕೆ

ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಕೇರಳದ ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯನ್ನು ಬೆಂಗಳೂರಿನ ಜಾರಿ ನಿರ್ದೇಶನಾಲಯ(ಇಡಿ) ಅಕಾರಿಗಳು ಬಂಸಿ, 4 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಮೊಹಮ್ಮದ್ ಅನುಪ್ ಜತೆ ಹಣಕಾಸು ವಹಿವಾಟು ಹೊಂದಿದ್ದ ಆರೋಪದಲ್ಲಿ ಗುರುವಾರ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿ ಮಾಡಿತ್ತು. ಇದರಂತೆ ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಆಗಮಿಸಿ ತನಿಖಾಕಾರಿಗಳ ಮುಂದೆ ಬಿನೀಶ್ ಹಾಜರಾಗಿದ್ದ. ವಿಚಾರಣೆ ಮುಗಿದ ಬಳಿಕ ಇ.ಡಿ. ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ಮನವಿ ಪುರಸ್ಕರಿಸಿದ ನ್ಯಾಯಾಲಯ 4 ದಿನ ಇ.ಡಿ. ವಶಕ್ಕೆ ನೀಡಿದೆ.
ಈಗಾಗಲೇ ಬಂಧನಕ್ಕೊಳಗಾಗಿರುವ ಆರೋಪಿ ಅನುಪ್ ಮೊಹಮ್ಮದ್‍ಗೆ ಬಿನೀಶ್ ಹಣಕಾಸಿನ ನೆರವು ನೀಡಿ ನಿರಂತರ ಸಂಪರ್ಕದಲ್ಲಿದ್ದ ಎಂಬ ಆರೋಪವಿದೆ. ಅಲ್ಲದೇ ಕೇರಳದ ಚಿನ್ನ ಸಾಗಣೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಮತ್ತು ಕನ್ನಡದ ನಟ-ನಟಿಯರಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ, ಡ್ರಗ್ಸ್ ವ್ಯವಹಾರದಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಸಹ ಇದೆ. ಈ ಹಿಂದೆ ಇಂಡಿಯನ್‍ಯುನಿಯನ್ ಮುಸ್ಲಿಂ ಲೀಗ್(ಐಯುಎಂಎಲ್)ಯುವ ವಿಭಾಗದ ಕೆಲ ಸದಸ್ಯರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಆರೋಪ ಕೇಳಿಬಂದಿದೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಅನುಪ್ ಮೊಹಮ್ಮದ್, ಅನಿಕಾ ಸೇರಿದಂತೆ ಹಲವು ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ