ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಕೂಡಲೇ ಪರಿಹಾರ ಒದಗಿಸುವುದರ ಜೊತೆಗೆ ಹಾನಿಗೊಳಗಾಗಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಮರು ನಿರ್ಮಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿಧಾರೆರೆ.ಬೀದರ್, ಕಲಬುರ್ಗಿ ಹಾಗೂ ಯಾದಗಿರಿಜಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಅವರು ಇತ್ತೀಚೆಗೆ ಭೇಟಿ ನೀಡಿದ್ದರು. ಅಲ್ಲಿಯ ಪರಿಸ್ಥಿತಿ ಆಧರಿಸಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರೆ.
ಕೊರೋನಾಕ್ಕೆ ತುತ್ತಾಗಿ ಜೀವನ ಕಳೆದುಕೊಂಡ ಜನರು ಹಳ್ಳಿಗಳಿಗೆ ಬಂದು ವ್ಯವಸಾಯದಲ್ಲಿ ತೊಡಗಿಸಿಕೊಂಡಿಧಾರೆರೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.30ಕ್ಕಿಂತ ಅಕ ಬಿತ್ತನೆಯಾಗಿದೆ. ಬೆಳೆಯೂ ಕೈಗೆ ಬರುವ ಕಾಲವಿದು. ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ಭೀಕರ ಮಳೆಯಾಗಿದೆ. ಶೇಂಗಾ, ಈರುಳ್ಳಿ, ಅಡಿಕೆ, ಭತ್ತ, ಕಾಫಿ, ಮೆಣಸು, ಜೋಳ, ಹಲವು ದ್ವಿದಳ ಧಾನ್ಯಗಳು, ಹತ್ತಿ, ಮೆಣಸು, ಮೆಣಸಿನಕಾಯಿ, ರಾಗಿ, ಸಜ್ಜೆ ಮುಂತಾದ ಬೆಳೆಗಳೆಲ್ಲ ಕೊಳೆತು ಹೋಗಿವೆ, ಕೊಚ್ಚಿ ಹೋಗಿವೆ ಇಲ್ಲ ಉದುರಿ ಹೋಗಿವೆ.
ಸುಮಾರು 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ. ಪೂರ್ಣ ಹಾನಿಯಾದ ಮನೆಗಳಿಗೆ 5 ಲಕ್ಷ ರೂ. ನೀಡುವುದಾಗಿ ಹೇಳಿ ಇದುವರೆಗೆ ಕೇವಲ 1 ಲಕ್ಷ ರೂ. ಗಳನ್ನು ನೀಡಲಾಗಿದೆ. ಕಳೆದ ವರ್ಷ ಮಳೆ ಮತ್ತು ನದಿಗಳು ಉಕ್ಕಿ ಹರಿದಿದ್ದರಿಂದ ಸುಮಾರು 10 ಲಕ್ಷ ಹೆಕ್ಟೇರ್ ಭೂಮಿ ಹಾನಿಗೊಳಗಾಗಿತ್ತು. ಈ ವರ್ಷ ಅದರ ಎರಡರಿಂದ ಎರಡೂವರೆ ಪಟ್ಟು ಹೆಚ್ಚು ಹಾನಿಯಾಗಿದೆ. ಪರಿಹಾರ ಕ್ರಮಗಳನ್ನು ಚರ್ಚಿಸಲು ತುರ್ತಾಗಿ ವಿಧಾನಸಭೆಯ ವಿಶೇಷ ಅವೇಶನ ಕರೆಯಬೇಕೆಂದು ಸಹ ಆಗ್ರಹಿಸಿದ್ದಾರೆ.