ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ

ಬೆಂಗಳೂರು: ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ ನಂತರ ಇದೀಗ ಕರ್ನಾಟಕ ಸರ್ಕಾರ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದೆ.
ರಾಜ್ಯದಲ್ಲಿ ಮುಸ್ಲಿಂ ಪುರುಷರು ಹಿಂದು ಹುಡುಗಿಯರಿಗೆ ಆಮಿಷವೊಡ್ಡಿ ತಮ್ಮ ಜಾತಿಯ ವಿಚಾರವನ್ನು ರಹಸ್ಯವಾಗಿಟ್ಟು ಲವ್ ಜಿಹಾದ್ ಮಾಡಿಕೊಂಡಿರುವ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆ ಕಠಿಣ ಕಾನೂನು ರಚಿಸುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಇದರಿಂದ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಆಡಳಿತದ ನಾಲ್ಕನೇ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ ಎನ್ನುವ ವಿಚಾರವನ್ನು ಅಕಾರಿಗಳು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಚರ್ಚಿಸಿ, ಅಗತ್ಯವಿದ್ದರೆ ಕಾಯ್ದೆ ರೂಪಿಸುವಂತೆ ಸಚಿವ ಬಸವರಾಜ್ ಬೊಮ್ಮಯಿ ಗೃಹ ಇಲಾಖೆಯ ಹಿರಿಯ ಅಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮಡಿಕೇರಿ ಸೇರಿದಂತೆ ಮತ್ತಿತರ ಭಾಗಗಳಲ್ಲಿ ಅನ್ಯ ಸಮುದಾಯದವರು ಮತಾಂತರ ನಡೆಸಿ ವಿವಾಹವಾಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಬಲಪಂಥೀಯ ಸಂಘಟನೆಗಳು ತೀವ್ರವಾಗಿ ವಿರೋಸಿ ಕೆಲವು ಸಂದರ್ಭಗಳಲ್ಲಿ ಕೋಮು ಸಂಘರ್ಷ ನಡೆದಿರುವ ನಿದರ್ಶನಗಳು ಸಾಕಷ್ಟಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ