ಜಾಗತಿಕ ಬಂಡವಾಳ ಹೂಡಿಕೆ ದುಂಡು ಮೇಜಿನ ವರ್ಚುಯಲ್ ಸಭೆ ನಾಳೆ ಆಯೋಜಿಸಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಹೂಡಿಕೆ ಹೆಚ್ಚಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದ್ದು, ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ಹೆಚ್ಚಿಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ. ಹಣಕಾಸು ಸಚಿವಾಲಯ, ರಾಷ್ಟ್ರೀಯ ಹೂಡಿಕೆ ಮತ್ತು ಮೂಲಸೌಕರ್ಯ ನಿಧಿ ಸಹಯೋಗದಲ್ಲಿ ಈ ಸಭೆ ಆಯೋಜನೆಗೊಂಡಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. ಪ್ರಮುಖ ಜಾಗತಿಕ ಸಾಂಸ್ಥಿಕ ಹೂಡಿಕೆದಾರರು, ಭಾರತೀಯ ವಾಣಿಜ್ಯ ಮುಖಂಡರು, ಹಣಕಾಸು ಮಾರುಕಟ್ಟೆ ನಿಯಂತ್ರಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರ್‍ಬಿಐ ಗವರ್ನರ್ ಮತ್ತು ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ. .ಜಾಗತಿಕ ಸಾಂಸ್ಥಿಕ ಹೂಡಿಕೆದಾರರು, ಅಮೆರಿಕ, ಐರೋಪ್ಯ ರಾಷ್ಟ್ರಗಳು, ಕೆನಡಾ, ಕೊರಿಯಾ, ಜಪಾನ್, ಪಶ್ಚಿಮ ಏಷ್ಯಾ, ಆಸ್ಟ್ರೇಲಿಯಾ ಮತ್ತು ಸಿಂಗಾಪುರ ಸೇರಿದಂತೆ ಪ್ರಮುಖ ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ