ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳ ತಂಡ ವಿಜಯಪುರ ಜಿಲ್ಲೆಯ ಕೋಲಾರ ತಾಲೂಕಿನ ಮಲಘಾಣ ಗ್ರಾಮದಲ್ಲಿ ತಾತ್ಕಾಲಿಕ ಭೂಕಂಪನ ಮಾಪಕ ಉಪಕರಣಗಳನ್ನು ಅಳವಡಿಸುವ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವ್ಶೆಜ್ಞಾನಿಕ ಅಧಿಕಾರಿಗಳನ್ನು ಒಳಗೊಂಡ ಮೂವರು ಅಧಿಕಾರಿಗಳ ತಂಡ ಜಿಲ್ಲೆಯ ಕೋಲಾರ ತಾಲೂಕಿನ ಮಲಘಾಣ, ಮಸೂತಿ, ಬಬಲೇಶ್ವರ ಮತ್ತಿತರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗಣಿ ಪ್ರದೇಶಗಳಿಗೆ ಭೇಟಿ ನೀಡಿ ಶಬ್ಧ ಮತ್ತು ಕಂಪನದ ಬಗ್ಗೆ ಹೇಳಿಕೆಯನ್ನು ಪಡೆದಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಂಡದ ವರದಿಯ ಮೇರೆಗೆ ಜಿಲ್ಲೆಯ ಕೋಲ್ಹಾರ ತಾಲೂಕಿನ ಮಲಘಾಣ ಗ್ರಾಮದಲ್ಲಿ ತಾತ್ಕಾಲಿಕ ಭೂಕಂಪನ ಮಾಪನ ಕೇಂದ್ರ ಅಳವಡಿಸುವಂತೆ ಜಿಲ್ಲಾಡಳಿತದಿಂದ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಜನರು ಯಾವುದೇ ರೀತಿಯ ಆತಂಕಪಡುವ ಅಗತ್ಯ ಇಲ್ಲ ಎಂದು ಜಿಲ್ಲಾಧಿಕಾರಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ