ಈ ವರ್ಷದಲ್ಲಿ ಭಾರತ ಸಾಂಕ್ರಾಮಿಕ ಕೋವಿಡ್ ವಿರುದ್ಧ ಸಮರ ಸಾರಿದ್ದು, ಭಾರತದ ರಾಷ್ಟ್ರೀಯ ಗುಣವನ್ನು ಇಡೀ ಜಗತ್ತು ಗಮನಿಸುತ್ತಿದೆ. ಭಾರತದ ನೈಜಶಕ್ತಿ ಏನು ಎಂಬುದು ವಿಶ್ವದ ಅರಿವಿಗೆ ಬಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ. ಅವರು ಈಗ್ಗೆ ಸ್ವಲ್ಪ ಹೊತ್ತಿನ ಮುಂಚೆ ವರ್ಚುವಲ್ ಜಾಗತಿಕ ಹೂಡಿಕೆದಾರರ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಭೆ ಪ್ರಗತಿಯಲ್ಲಿದೆ. ಕೇಂದ್ರ ಹಣಕಾಸು ಸಚಿವಾಲಯ ಮತ್ತು ರಾಷ್ಟ್ರೀಯ ಹೂಡಿಕೆ ಮತ್ತು ಮೂಲಸೌಕರ್ಯ ವೃದ್ಧಿ ಈ ಸಮಾವೇಶವನ್ನು ಆಯೋಜಿಸಿವೆ. ಇದರಲ್ಲಿ ಜಾಗತಿಕ ಸಾಂಸ್ಥಿಕ ಹೂಡಿಕೆದಾರರು, ಭಾರತೀಯ ವಾಣಿಜ್ಯ ನಾಯಕರು ಮತ್ತು ಭಾರತ ಸರ್ಕಾರದ ಉನ್ನತಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವವರು ಹಾಗೂ ಮಾರುಕಟ್ಟೆ ನಿಯಂತ್ರಕರು ಸಮಾಲೋಚನೆಗಳನ್ನು ನಡೆಸಲಿದ್ದಾರೆ. ಕೇಂದ್ರ ಹಣಕಾಸು ಸಚಿವರು, ಆರ್‍ಬಿಐ ಗವರ್ನರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಶ್ವದ 22 ಪ್ರಮುಖ ರಾಷ್ಟ್ರಗಳಾದ ಅಮೆರಿಕ, ಯೂರೋಪ್, ಕೆನಡ, ಕೊರಿಯಾ, ಜಪಾನ್, ಮಧ್ಯಪ್ರಾಚ್ಯ ದೇಶಗಳು, ಆಸ್ಟ್ರೇಲಿಯಾ, ಸಿಂಗಾಪುರ್ ಸೇರಿದಂತೆ ಇತರ ರಾಷ್ಟ್ರಗಳ ಜಾಗತಿಕ ಹೂಡಿಕೆದಾರರು ಪಾಲ್ಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ