ಬಿಹಾರದ ಮೂರನೇ ಹಾಗೂ ಅಂತಿಮ ಹಂತದ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದಿದೆ. ಈ ಹಂತದಲ್ಲಿ ಕಿಶನ್ ಗಂಜ್, ಕತಿಹಾರ್, ಮಾಧೇಪುರ, ಸುಪೌಲ್ ಸೇರಿದಂತೆ 15 ಜಿಲ್ಲೆಗಳ 78 ವಿಧಾನಸಭಾ ಕ್ಷೇತ್ರಗಳಿಗೆ ನಾಡಿದ್ದು, 7ರಂದು ಮತದಾನ ನಡೆಯಲಿದೆ. ಇದೇ ಅವಧಿಯಲ್ಲಿ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ಮತದಾನ ನಡೆಯಲಿದೆ. ಬಿಜೆಪಿ, ಆರ್‍ಜೆಡಿ ಹಾಗೂ ಕಾಂಗ್ರೆಸ್ ಪಕ್ಷಗಳ ನಾಯಕರು ಮತದಾರರನ್ನು ಸೆಳೆಯಲು ಕೊನೆಯ ಹಂತದ ಪ್ರಯತ್ನ ನಡೆಸಿದರು. ನಾಯಕರು ಸರಣಿ ಪ್ರಚಾರ ಸಭೆಗಳನ್ನು ನಡೆಸಿದರು. ರಾಷ್ಟ್ರೀಯ ಲೋಕ ಸಮತಾ ಪಾರ್ಟಿ-ಆರ್‍ಎಲ್‍ಎಸ್‍ಪಿ, ಹಿಂದೂಸ್ತಾನಿ ಅವಾಮ್ ಮೋರ್ಚಾ-ಎಚ್‍ಎಎಂ ಸೇರಿದಂತೆ ಎಡಪಕ್ಷಗಳು ಕೂಡ ರ್ಯಾಲಿ ಹಾಗೂ ರೋಡ್ ಶೋ ನಡೆಸಿದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಧುಬನಿಯಲ್ಲಿ ಎನ್‍ಡಿಎ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ, ವಿರೋಧ ಪಕ್ಷಗಳಿಗೆ ಅಭಿವೃದ್ಧಿ ಕುರಿತು ಯಾವುದೇ ಕಾರ್ಯಸೂಚಿ ಇಲ್ಲ. ಅವರು ರಾಜ್ಯದ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಕಿಶನ್ ಗಂಜ್ ಮತ್ತು ಆರಾರಿಯಾಲ್ಲಿ ಆರ್‍ಜೆಡಿ ನಾಯಕ ತೇಜಸ್ವಿ ಯಾದವ್ ಮಾತನಾಡಿ, ಇದು ಕೇವಲ ವಿಧಾನಸಭಾ ಚುನಾವಣೆಯಲ್ಲ, ನಿರುದ್ಯೋಗ ಹೋಗಲಾಡಿಸಲು ನಡೆಸುವ ಹೋರಾಟ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ