ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿರುವ “ಕನ್ನಡ ಕಾಯಕ ವರ್ಷಾಚರಣೆ 2020 ರ ಲಾಂಛನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಇಂದು ವಿಧಾನಸೌಧದಲ್ಲಿ ಬಿಡುಗಡೆಗೊಳಿಸುವ ಮೂಲಕ ಕನ್ನಡ ಕಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಟಿ.ಎಸ್. ನಾಗಾಭರಣ, ಒಂದು ವರ್ಷ ಪೂರ್ತಿ ಅರ್ಥಪೂಣವಾಗಿ ಈ ಕಾರ್ಯಕ್ರಮ ಆಚರಿಸಲು ಹಲವು ಪ್ರತ್ಯೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರ ಸಹಭಾಗಿತ್ವ ಬಹಳ ಮುಖ್ಯವಾಗಿದೆ ಎಂದರು. ಸರ್ಕಾರಿ ಮುದ್ರಣಾಲಯ ಹಾಗೂ ಸರ್ಕಾರಿ ಇಲಾಖೆಗಳು ಮುದ್ರಿಸುವ ತಲೆಬರಹಗಳು ನಮೂನೆಗಳು, ಪೂರಕ ಸಾಮಗ್ರಿಗಳು, ಪ್ರಕಟಣೆಗಳು, ಜಾಹಿರಾತುಗಳಲ್ಲಿ ಕನ್ನಡ ಕಾಯಕ ವರ್ಷ ಲಾಂಛನವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಹೊರರಾಜ್ಯ ಮತ್ತು ಹೊರದೇಶದ ಜನರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ “ಅಪಾರ್ಟ್‍ಮೆಂಟ್ ಗಳಲ್ಲಿ ಕನ್ನಡ ಕಲಿಕೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಒಟ್ಟಾರೆಯಾಗಿ ಕನ್ನಡ ಕಾಯಕ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಟಿಬದ್ಧವಾಗಿರುವುದಾಗಿ ಟಿ.ಎಸ್. ನಾಗಾಭರಣ ನುಡಿದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ