ವಾಯು ಮಾಲಿನ್ಯ: ದೀಪಾವಳಿ ನಂತರ ವಿಚಾರಣೆ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು, ನೆರೆ ರಾಜ್ಯಗಳಲ್ಲಿ ತ್ಯಾಜ್ಯ ಸುಡುವಿಕೆ ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ವಾಯು ಮಾಲಿನ್ಯ ಸಂಬಂಧ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳ ವಿಚಾರಣೆಯನ್ನು ದೀಪಾವಳಿ ರಜೆಯ ನಂತರ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ.ಬೋಬ್ಡೆ ತಿಳಿಸಿದ್ದಾರೆ.
ಇನ್ನು ದಿಲ್ಲಿಯಲ್ಲಿ ಉಂಟಾಗಿರುವ ವಾಯು ಮಾಲಿನ್ಯಕ್ಕೆ ಶೇ.40ರಷ್ಟು ತ್ಯಾಜ್ಯ ಸುಡುವಿಕೆ ಕಾರಣವಾಗಿದ್ದು, ಮಾಲಿನ್ಯದಿಂದ ಸೋಂಕು ಹರಡುವಿಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಹಾರ್ವಡ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ತಿಳಿಸಿರುವುದಾಗಿ ಅರ್ಜಿ ಸಲ್ಲಿಕೆಯಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ