ಬೆಂಗಳೂರು: ರಾಜ್ಯದಲ್ಲಿ ಶಾಲಾ ಪುನಾರಂಭ ಕುರಿತು ಶಿಕ್ಷಣ ಇಲಾಖೆ ಅಕಾರಿಗಳು ಮೂರನೇ ದಿನವಾದ ಶುಕ್ರವಾರವೂ ಸಭೆ ಸಭೆ ನಡೆಸಿದ್ದು ಪೊಷಕರಿಂದ ಹಾಗೂ ಖಾಸಗಿ ಶಾಲಾ ಸಂಘಟನೆಗಳಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ಇಲಾಖೆಯ ಅಕಾರಿಗಳು ಸೇರಿದಂತೆ ಖಾಸಗಿ ಶಾಲಾ ಸಂಘಟನೆಗಳು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಪೊಷಕರು ಹಾಗೂ ಜಿಲ್ಲಾ ಉಪನಿರ್ದೇಶಕರುಗಳು, ಶಾಲಾ ಮುಖ್ಯಸ್ಥರೊಂದಿಗೆ ನಾಲ್ಕು ಹಂತದಲ್ಲಿ ಸಭೆ ನಡೆದಿದ್ದು ಶನಿವಾರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತಿದೆ.
ಈ ನಡುವೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖಂಡರು ರಾಜ್ಯ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿದ್ದು ಕೆಲವು ಸಲಹೆಗಳನ್ನೂ ನೀಡಿದ್ದಾರೆ.
ಶಾಲೆ ಆರಂಭವಾದರೆ 15 ದಿನಕ್ಕೊಂದು ಬಾರಿ ವಿದ್ಯಾರ್ಥಿಗಳು-ಶಿಕ್ಷಕರಿಗೆ ಉಚಿತ ಕೋವಿಡ್ ಪರೀಕ್ಷೆ, ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ, ಶೈಕ್ಷಣಿಕ ಅವ ಬದಲಾವಣೆ, 9 ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸುವಂತೆ ಹಾಗೂ ಪಾಳಿಯಲ್ಲಿ ತರಗತಿ ನಡೆಸುವಂತೆ ಸಲಹೆ ನೀಡಿದ್ದಾರೆ.
ಈ ಎಲ್ಲಾ ಅಭಿಪ್ರಾಯಗಳನ್ನು ಸಂಗ್ರಹಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಶನಿವಾರ ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ವರದಿ ಸಲ್ಲಿಸಲಿದ್ದು ಸೋಮವಾರದ ವೇಳೆಗೆ ಸ್ಪಷ್ಟ ಚಿತ್ರಣ ದೊರಕಲಿದೆ.