ರಾಜ್ಯದ ಕೆಲ ಜಿಲ್ಲೆಯಲ್ಲಿ ಇತ್ತೀಚಿಗೆ ಉಂಟಾದ ಅತಿವೃಷ್ಟಿ ಪ್ರವಾಹದಿಂದ 24 ಸಾವಿರದ 942 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ. ಪ್ರವಾಹದಿಂದ 90 ಮಂದಿ ಸಾವನ್ನಪ್ಪಿದ್ದು, 180 ತಾಲೂಕುಗಳನ್ನು ಪ್ರವಾಹಪೀಡಿತ ಎಂದು ಘೋಷಿಸಲಾಗಿದೆ, ಮೃತಪಟ್ಟವರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ. 21.6 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. 29 ಸಾವಿರದ 560 ಮನೆಗಳಿಗೆ ನೀರು ನುಗ್ಗಿದ್ದು, 48 ಸಾವಿರದ 224 ಮನೆಗಳಿಗೆ ಹಾನಿಯಾಗಿದೆ. ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ ರೂಪಾಯಿ, ಅಲ್ಪ ಹಾನಿಗೊಳಗಾದ ಮನೆಗಳಿಗೆ 3 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗುತ್ತಿದೆ. ಬೆಳೆ ಹಾನಿ ಪರಿಹಾರವನ್ನು ತಕ್ಷಣ ವಿತರಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಅಶೋಕ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ